ರಾಜ್ಯ ಸರ್ಕಾರದಿಂದ ಟೆಂಡರ್ ಪೂರ್ವ ಪರಿಶೀಲನಾ ಸಮಿತಿ; ನ್ಯಾ. ರತ್ನಕಲಾ ಅಧ್ಯಕ್ಷತೆ

ಬೆಂಗಳೂರು : ವಿವಿಧ ಸರಕು ಮತ್ತು ಸೇವೆಗಳನ್ನು ಪಡೆಯಲು ರಾಜ್ಯ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶೆ ಶ್ರೀಮತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಲಸಂಪನ್ಮೂಲ  ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ. ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣತ)  ಹಾಗೂ ರಾಜ್ಯ ಲೆಕ್ಕ ಪತ್ರ ಇಲಾಖೆ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರುಗಳು, ಪಾರದರ್ಶಕತೆ, ನ್ಯಾಯಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ.

ಯೋಜನೆ ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.

ಕೆಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “50 ಕೋಟಿಗಿಂತ ಹೆಚ್ಚಿನ ಮೊತ್ತದ ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಆರ್ಥಿ ತಜ್ಞರು, ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುತ್ತದೆ” ಎಂದು ಹೇಳಿದ್ದರು.

ಈ ಉನ್ನತ ಮಟ್ಟದ ಸಮಿತಿಯನ್ನು ಕೆಟಿಪಿಟಿ ಕಾಯ್ದೆಯ ಅನ್ವಯ ರಚನೆ ಮಾಡಲಾಗಿದೆ. ಕಾಮಗಾರಿ ಅಂದಾಜು ಮೊತ್ತ, ಟೆಂಡರ್ ನಿಯಮಗಳು ಇವುಗಳನ್ನು ಸಮಿತಿ ಪರಿಶೀಲನೆ ಮಾಡಿದ ಬಳಿಕ ಕಾಮಗಾರಿ ಆರಂಭವಾಗಬೇಕಿದೆ.

Donate Janashakthi Media

Leave a Reply

Your email address will not be published. Required fields are marked *