ದಕ್ಷಿಣ ಇಥಿಯೋಪಿಯಾ: ಭೀಕರ ಕಾರು ಅಪಘಾತ – 66 ಮಂದಿ ಸಾವು

ನವದೆಹಲಿ: ಭೀಕರ ಕಾರು ಅಪಘಾತದಲ್ಲಿ 66ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ದಕ್ಷಿಣ ಇಥಿಯೋಪಿಯಾದಲ್ಲಿ ವರದಿಯಾಗಿದೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಿದಾಮಾ ಆರೋಗ್ಯ ಬ್ಯೂರೋ,’ ಅಪಘಾತ ಕಾರ್ ಒಂದರಲ್ಲಿ 66 ಮಂದಿ ಮೃತಪಟ್ಟಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಬೋನಾ ಜನರಲ್ ಹಾಸ್ಪಿಟಲ್‌ಗೆ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಕಾನ್ಪುರದಲ್ಲಿ ಅತ್ಯಾಚಾರ: ಅಜ್ಜ, ತಂದೆ ಮತ್ತು ಚಿಕ್ಕಪ್ಪನಿಂದಲೇ 14 ವರ್ಷದ ಬಾಲಕಿ ಗರ್ಭೀಣಿ

ದಕ್ಷಿಣ ಇಥಿಯೋಪಿಯಾದ ಪೂರ್ವ ವಲಯದ ಗೆಲಾನಾ ಸೇತುವೆಯಲ್ಲಿ ಈ ದುರಂತ ಸಂಭವಿಸಿದ್ದು, ನೀರಿನಲ್ಲಿ ಮುಳುಗಿರುವ ಕಾರು ಹಾಗೂ ಜನರನ್ನು ಅಧಿಕಾರಿಗಳು ಹೊರತೆಗೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಅಪಘಾತ ಹೇಗೆ ಸಂಭವಿಸಿತ್ತು ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ.

ಒಂದು ಕಾರ್ ಅಪಘಾತದಿಂದ 66 ಮಂದಿ ಹೇಗೆ ಮೃತಪಟ್ಟಿದ್ದಾರೆ ಎಂಬುದು ಈವರೆಗೆ ತಿಳಿದು ಬಂದಿಲ್ಲ. ಅಲ್ಲಿನ ಸರ್ಕಾರ ಅಥವಾ ಅಧಿಕಾರಿಗಳು ಅಪಘಾತದ ಬಗ್ಗೆ ಸ್ಪಷ್ಟನೆ ನೀಡುವ ಗೋಜಿಗೆ ಹೋಗಿಲ್ಲ.

ಇದನ್ನೂ ನೋಡಿ : ತುಮಕೂರು ರಸ್ತೆಯ ತಾಳೇಕೇರಿ ಬಳಿ ಭೀಕರ ಅಪಘಾತ Janashakthi Media

Donate Janashakthi Media

Leave a Reply

Your email address will not be published. Required fields are marked *