ನುಡಿದಂತೆ ನಡೆಯದ ಪಕ್ಷ ಅಂದ್ರೆ ಅದು ಬಿಜೆಪಿ | ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ. ಹೀಗಾಗಿ ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿ ಆ ಪಕ್ಷ ನೀಡಿದ ಯಾವ ಗ್ಯಾರಂಟಿಗಳನ್ನೂ ಜನರು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಹಳ ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ, ಯಾವ ಪ್ರಗತಿಯನ್ನೂ ಸಾಧಿಸಿಲ್ಲ. ಈಗ ಪ್ರಗತಿ ಸಾಧಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಜೆಪಿಯವರು ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುತ್ ಕಳ್ಳತನ ಎಸಗಿ ದಂಡ ಕಟ್ಟಿರುವ ಕುಮಾರಸ್ವಾಮಿಯವರಿಗೆ ನಮ್ಮನ್ನು ಅಪೇಕ್ಷಿಸಲು ಯಾವ ನೈತಿಕತೆಯೂ ಇಲ್ಲ. ಮಾಜಿ ಶಾಸಕ ಯತೀಂದ್ರರವರು ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ , ಅವರ ಬಳಿ ಏನಾದರೂ ಪುರಾವೆ ಇದೆಯೇ ಎಂದು ಪ್ರಶ್ನಿಸಿದರು. ಯತೀಂದ್ರರವರು ಸಿಎಸ್ ಆರ್ ಫಂಡ್ ಬಗ್ಗೆ ಮಾತನಾಡಿದ್ದರೆ, ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸುತ್ತಾರೆ. ಕುಮಾರಸ್ವಾಮಿಯವರ ಕಾಲದಲ್ಲಿ ವರ್ಗಾವಣೆಗಳ ಮೂಲಕ ದುಡ್ಡು ಮಾಡಿರುವುದು ಜಗಜ್ಜಾಹೀರವಾಗಿದೆ. ಅವರು ನಮ್ಮ ವಿರುದ್ದ ಆರೋಪಗಳನ್ನು ಮಾಡುವ ನೈತಿಕತೆ ಇಲ್ಲ ಎಂದರು.

ಇದನ್ನೂ ಓದಿ:ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆಯೆ? ದುಬೈಯಲ್ಲಿ ತಂತ್ರ ನಡೆಯುತ್ತಿದೆಯೆ?

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ

ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ವಿಮಾನನಿಲ್ದಾಣದಲ್ಲಿ ಹೇಳಿದರು.

ಬರಗಾಲ ಬಂದಾಗ ನರೇಗಾ ಯೋಜನೆಯಡಿ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.

ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‌ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.

ವಿಡಿಯೋ ನೋಡಿ:ಕಾಸಿಗಾಗಿ ಹುದ್ದೆ ಪ್ರಕರಣ : ಸಿಎಂ ಕಚೇರಿಯಲ್ಲಿ ಏನು ನಡೆಯುತ್ತಿದೆ – ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ

Donate Janashakthi Media

Leave a Reply

Your email address will not be published. Required fields are marked *