ಬೈಕ್‌ ಕಳ್ಳತನದ ಆರೋಪದಲ್ಲಿಯೂ ಆರೋಪಿ ಗಿರೀಶ್‌ ಹೆಸರು

ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ಗಿರೀಶ್‌ ಬಂಧನವಾಗಿದ್ದು, ಆರೋಪಿಯ ಬಂಧನ ಹಾಗೂ ಹಿನ್ನೆಲೆಗೆ ಟ್ವಿಸ್ಟ್‌ ಕೇಳಿಬಂದಿದ್ದು, ಆತನ ಹಿನ್ನೆಲೆ ಹಾಗೂ ಬೈಕ್‌ ಕಳ್ಳತನ ಪ್ರಕರಣವೊಂದರಲ್ಲಿ ಆತ ಆರೋಪಿಯಾಗಿದ್ದ ಎಂಬ ಮಾಹಿತಿಯನ್ನು ಪೊಲೀಸ್‌ ಕಮಿಷನರ್‌ ಹೇಳಿದ್ದಾರೆ. ಬೈಕ್‌

ರೋಪಿ ಗಿರೀಶ್ ಮೈಸೂರಿನ ಮಹಾರಾಜ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿ ಅಂಜಲಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಗಿಯೂ ಕೆಲವು ಮೂಲಗಳು ಮಾಹಿತಿ ನೀಡಿವೆ. ವಾರದ ಮುಂಚೆ ಯುವತಿ 2 ಸಾವಿರ ಹಣ ಕೇಳಿದ್ದಳು. ಗಿರೀಶ್ ಒಂದು ಸಾವಿರ ರೂಪಾಯಿ ಪೋನ್ ಪೇ ಮಾಡಿದ್ದ. ಆ ನಂತರ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್ ಮಾಡಿದ್ದಳು.

ಫೋನ್ ಕರೆ ಕೂಡ ಸ್ವೀಕರಿಸುತ್ತಿರಲಿಲ್ಲ. ಆ ನಂತರ ಆರೋಪಿ ಸಿಟ್ಟಿಗೆದ್ದು ಮೈಸೂರಿನಿಂದ ಹುಬ್ಬಳ್ಳಿಗೆ ಬಂದು 4.30ರ ಸುಮಾರಿಗೆ ಕೊಲೆ ಮಾಡಿದ್ದಾನೆ. ಅಲ್ಲಿಂದ ಹುಬ್ಬಳ್ಳಿ ಹೊಸ ಬಸ್ ಸ್ಟ್ಯಾಂಡ್‌ಗೆ ಬಂದು ಹಾವೇರಿಗೆ ಬಂದಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಕತ್ತು ಕೊಯ್ದು ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ರೋಚಕವಾಗಿ ಸಿಕ್ಕ ಆರೋಪಿ ಗಿರೀಶ್: ಬೈಕ್‌ ಕಳುವು ಮಾಡಿದ್ದ ಆರೋಪಿ ಗಿರೀಶ್‌ ಹಾವೇರಿಯಿಂದ ಮೈಸೂರಿಗೆ ರೈಲು ಹತ್ತಿದ್ದ. ಮಧ್ಯದಲ್ಲಿ ಬಿಹಾರ ವ್ಯಕ್ತಿಯೊಬ್ಬನ ಮೊಬೈಲ್‌ನಲ್ಲಿ ಪೋಟೋ ನೋಡಿ ಮೈಸೂರಿಗೆ ವಾಪಸ್ ಹೋಗಿ ಮಹಾರಾಜ್ ಹೋಟೆಲ್‌ನಲ್ಲಿ ಮಲಗಿದ್ದ. ಆ ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಸ್ ಆಗಲು ಬರುತ್ತಿದ್ದಾಗ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಬಳಿಕ ಪರಾರಿಯಾಗಿದ್ದ ಆರೋಪಿ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದಾಗಲೇ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆದರೆ, ರೈಲಿನಲ್ಲೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ.ವಿಶ್ವ ಅಲಿಯಾಸ್ ಗಿರೀಶ್ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರ ಜತೆ ಜಗಳ ಮಾಡಿದ್ದಲ್ಲದೆ, ಚಾಕು ತೊರಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದು ರೈಲಿನಲ್ಲಿದ್ದ ಪ್ರಯಾಣಿಕರು ಆತನಿಗೆ ಥಳಿಸಿದ್ದರು. ನಂತರ ಆತ ದಾವಣಗೆರೆ ತಾಲೂಕಿನ ಮಾಯಕೊಂಡ ರೈಲು ನಿಲ್ದಾಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ.ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದ.

ಈ ವೇಳೆ, ಸಹ ಪ್ರಯಾಣಿಕರು ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ನಂತರ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು, ಅಂಜಲಿ ಹತ್ಯೆ ಆರೋಪಿ ರೈಲಿನಲ್ಲಿದ್ದಾನೆ ಎಂದು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಯಕೊಂಡಕ್ಕೆ ಬಂದ ಹುಬ್ಬಳ್ಳಿ ಪೊಲೀಸರು ತಡರಾತ್ರಿ ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಆರೋಪಿ ಗಿರೀಶ್‌ನನ್ನು ಚೆನ್ನಮ್ಮ ವೃತ್ತದಲ್ಲಿ ಎನ್‌ಕೌಂಟರ್ ಮಾಡಬೇಕೆಂದು ಅಂಜಲಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇನ್ನು ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಲಾಗಿತ್ತು. ನಿನ್ನೆ ಗುರುವಾರ ರೈಲ್ವೆ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಕೋಮಾ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಯಾಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆಯ ನಂತರವಷ್ಟೇ ತಿಳಿಯಬಹುದಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.

ಇದನ್ನೂ ನೋಡಿ: ಪಂಜಾಬ್ ಲೋಕಸಭೆ : ” ದೆಲ್ಲಿ ದಾರಿ ಬಂದ್ ಮಾಡಿದ್ದ ಬಿಜೆಪಿಗೆ ಹಳ್ಳಿ ದಾರಿ ಬಂದ್ ” ವ್ಯಾಪಕಗೊಂಡ ಅನ್ನದಾತರ ಆಕ್ರೋಶ

Donate Janashakthi Media

Leave a Reply

Your email address will not be published. Required fields are marked *