ಅತ್ಯಾಚಾರ ಪ್ರಕರಣದಲ್ಲಿ ಜಾಮೀನು: ಸಂತ್ರಸ್ತೆಯನ್ನು ತುಂಡು ತುಂಡಆಗಿ ಕತ್ತರಿಸಿದ ಆರೋಪಿ

ಭುವನೇಶ್ವರ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ ಕುನು ಕಿಸನ್‌ ಎಂಬಾತ ಸಂತ್ರಸ್ತೆಯನ್ನು ಅಪಹರಿಸಿ ಹತ್ಯೆಗೈದು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಹಲವು ಕಡೆ ಎಸೆದಿರುವ ಆಘಾತಕಾರಿ ಘಟನೆ ಒಡಿಶಾದ ರೂರ್ಕೆಲಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಕುನು ಕಿಸನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಬುಧವಾರ (ಡಿ.11) ತಿಳಿಸಿದ್ದಾರೆ . 2023ರ ಆಗಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕುನು ಕಿಸನ್ ಅತ್ಯಾಚಾರ ಎಸಗಿದ್ದ.

ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನಂತರ ಕುನು ಕಿಸನ್‌ನನ್ನು ಜೈಲಿಗೆ ಕಳುಹಿಸಲಾಗಿತ್ತು. ಇತ್ತೀಚೆಗೆ ಜಾಮೀನಿನ ಆತ ಮೇಲೆ ಬಿಡುಗಡೆಯಾಗಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪಂಚಮಸಾಲಿ ಪ್ರತಿಭಟನೆ: ಲಾಠಿ ಚಾರ್ಜ್ ಖಂಡಿಸಿ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಪ್ರತಿಭಟನೆಗೆ ಕರೆ

ಸಂತ್ರಸ್ತ ಬಾಲಕಿ ಜರ್ಸುಗಢದಲ್ಲಿರುವ ತನ್ನ ಚಿಕ್ಕಮ್ಮನೊಂದಿಗೆ ವಾಸಿಸುತ್ತಿದ್ದು ಬ್ಯೂಟಿ ಪಾರ್ಲ‌್ರನಲ್ಲಿ ಕೆಲಸ ಮಾಡುತ್ತಿದ್ದಳು. ಮತ್ತೆ ಆಕೆಯನ್ನು ಅಪಹರಿಸಿ ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ದೇಹದ ಭಾಗಗಳನ್ನು ತರ್ಕೇರಾ, ಬ್ರಹ್ಮಣಿ ನದಿ ಹಾಗೂ ಬಲುಘಾಟ್ ಪ್ರದೇಶದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಸನ್ ತನ್ನ ಬೈಕ್‌ನ ನಂಬರ್ ಪ್ಲೇಟ್ ಬದಲಾಯಿಸಿಕೊಂಡು ತಿರುಗಾಡುವುದು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ನಂತರ ಬಾಲಕಿ ನಾಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂತು. ಈ ವೇಳೆ ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಂತ್ರಸ್ತೆಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಎಂದು ಪೊಲೀಸರು ಹೇಳಿದ್ದಾರೆ. ಮೃತಳ ದೇಹದ ಭಾಗಗಳನ್ನು ವಶಪಡಿಸಿಕೊಂಡು ಪೋಷಕರಿಗೆ ಒಪ್ಪಿಸಲಾಗಿದೆ ಎನ್ನಲಾಗಿದೆ.

ಅತ್ಯಾಚಾರ ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದರೆ ತಾನು ಅಪರಾಧಿ ಎಂದು ತೀರ್ಪು ಬರಬಹುದು ಎಂಬ ಭಯದಿಂದ ಈ ಕೃತ್ಯ ಎಸಗಿದ್ದಾಗಿ ಆರೋಪಿ ಹೇಳಿದ್ದಾನೆ. ಕಿಸನ್ ಹಾಗೂ ಸಂತ್ರಸ್ತೆಯು ಬಹಳ ಕಾಲದಿಂದ ಪರಸ್ಪರ ಪರಿಚಿತರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹತ್ಯೆಗೆ ಬಳಸಿದ ಚಾಕು ಮತ್ತು ಮೋಟರ್ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದು,ಈ ಪ್ರಕರಣ ಸಂಬಂಧ ಇನ್ನು ಹೆಚ್ಚಿನ ತನಿಖೆ ನಡೆಸುವುದಾಗಿ ತಿಳಿದು ಬಂದಿದೆ.

ಇದನ್ನೂ ನೋಡಿ: ಕನ್ನಡ ಸಾಹಿತ್ಯ ಸಮ್ಮೇಳನ |ಮಂಡ್ಯದ ಪ್ರೀತಿಯ ನಾಟಿ ಕೋಳಿ ಸಾರುಮುದ್ದೆ ನೀಡಬೇಕು – ಎಂ.ಜಿ.ಹೆಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *