ಸೈಬರ್ ವಂಚಕರಿಗೆ 500ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ಪೂರೈಸಿರುವ ಆರೋಪಿ ಬಂಧನ

ಮಂಗಳೂರು: ದೆಹಲಿ ವಿಮಾನ ನಿಲ್ದಾಣದಲ್ಲಿ ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ಗಳನ್ನು ಪೂರೈಸುತ್ತಿದ್ದ ಕಣಾತಲ ವಾಸುದೇವ ರೆಡ್ಡಿ ಎಂಬಾತನನ್ನು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ. ಅವನು 500ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ಪೂರೈಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ದೊಡ್ಡ ಸೈಬರ್ ಕ್ರೈಂ ಜಾಲವನ್ನು ಈ ಬಂಧನ ಬಯಲು ಮಾಡಿದೆ. ಪೊಲೀಸರು ಇನ್ನೂ ತನಿಖೆ ಮುಂದುವರಿಸಿದ್ದಾರೆ. ಸೈಬರ್ ವಂಚಕರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ. ಆರೋಪಿ ಸೈಬರ್ ವಂಚಕರಿಗೆ ಭಾರತದಿಂದ ವಿವಿಧ ಕಂಪನಿಗಳ 500ಕ್ಕೂ ಹೆಚ್ಚು ಸಿಮ್‌ಗಳನ್ನು ಪೂರೈಕೆ ಮಾಡಿದ್ದನು.

ಇದನ್ನೂ ಓದಿ: ಮಾಂಸಾಹಾರಕ್ಕೆ ಮಂಡ್ಯ ಸಮ್ಮೇಳನ ಮುನ್ನುಡಿ

ಆರೋಪಿ ಕಣಾತಲ ವಾಸುದೇವ ರೆಡ್ಡಿ, ಓಡಿಶಾ ಮೂಲದವನು. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಕಣಾತಲ ವಾಸುದೇವ ರೆಡ್ಡಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದರು.

ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜು ಎಂಬುವನು ಹಣ ವಿನಿಯೋಗಿಸಲು ವಾಟ್ಸಾಪ್ ಮೂಲಕ ನಕಲಿ ಲಿಂಕ್ ಕಳುಹಿಸಿ ಅದರ ಮೂಲಕ ಲಕ್ಷಾಂತರ ರೂ. ದೋಚಿದ್ದನು. ಹೀಗೆ, ಹಂತ ಹಂತವಾಗಿ 10,84,017 ರೂಪಾಯಿ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೈಬರ್‌ ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ಬಂಧಿಸಿದ್ದಾರೆ.

ಆರೋಪಿ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ವಿಚಾರಣೆಗೆ ಒಳಪಡಿಸಿದಾಗ ಸಿಮ್ ಮಾರಾಟ ದಂಧೆಯ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಕೂಡಲೇ ಪೊಲೀಸರು ಕಣಾತಲ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ್ದರು.

ಆರೋಪಿ ಕಣಾತಲ ದುಬೈಗೆ ತೆರಳು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಇಲ್ಲಿನ ಇಮಿಗ್ರೇಶನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಇನ್ನುಳಿದ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರಿಂದ ತನಿಖೆ ಮುಂದುವರೆದಿದೆ.

ದುಬೈಗೆ ತೆರಳುವಾಗ ಬಂಧನ

ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅರ್ಗವಾಲ್ ಮಾತನಾಡಿ, ಮೂಡಬಿದಿರೆ ನಿವಾಸಿಯೊಬ್ಬರು ಸೈಬರ್ ವಂಚನೆ ಬಗ್ಗೆ ದೂರು ನೀಡಿದ್ದರು. ತನಿಖೆ ಕೈಗೊಂಡು ಹಣ ವರ್ಗಾವಣೆಯಾದ ಖಾತೆಯನ್ನು ಫ್ರೀಝ್ ಮಾಡಿದ್ದೇವು. 9,50,000 ಹಣವನ್ನು ನಾವು ಪ್ರೀಝ್ ಮಾಡಿದ್ದೇವೆ ಎಂದು ಹೇಳಿದರು.

ಕೇರಳ ಮತ್ತು ಗುಜರಾತ್ ಮೂಲದ ಎರಡು ಖಾತೆಗಳಿಗೆ ಹಣ ವರ್ಗಾವಣೆಯಾಗಿತ್ತು. ಟೆಕ್ನಿಕಲ್ ವಿಚಾರಣೆ ಸಂದರ್ಭದಲ್ಲಿ ಸಿಮ್ ಕಾರ್ಡ್ ಬಗ್ಗೆ ಮಾಹಿತಿ ಗೊತ್ತಾಯಿತು. ವಿಶಾಖಪಟ್ಟಣ ಮತ್ತು ಗೋಧಾವರಿ ಪ್ರದೇಶದಿಂದ ಸಿಮ್ ಕಾರ್ಡ್ ನೀಡಿರುವುದು ತಿಳಿಯಿತು. ನಮ್ಮ ಒಂದು ತಂಡ ಆಂಧ್ರಪ್ರದೇಶದ ಗೋಧಾವರಿಗೆ ತೆರಳಿ ಸತ್ಯನಾರಾಯಣ ರಾಜು ಎಂಬಾತನನ್ನು ಬಂಧಿಸಿದೆ. ಆತನಿಂದ 300ಕ್ಕೂ ಹೆಚ್ಚು ಸಿಮ್‌ಗಳನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಸಿದ್ದಾರೆ.

ಸತ್ಯನಾರಾಯಣ ರಾಜು ಬೇರೆ ಬೇರೆಯವರ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆಯುತ್ತಿದ್ದನು. ದುಬೈನಲ್ಲಿದ್ದ ವಿನ್ಸೆಕ್ಸ್ ಎಂಬ ಕಂಪೆನಿಗೆ ಈ ಸಿಮ್ ಪೂರೈಸುತ್ತಿದ್ದನು. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಚೀನಾ ಮೂಲದ ಕಂಪನಿಯಂದು ಗೊತ್ತಾಗಿದೆ. ದುಬೈನಲ್ಲಿ ಕಾಲ್ ಸೆಂಟರ್ ತೆರೆದು ಜನರಿಗೆ ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಎಂದು ಹೇಳಿ ವಂಚನೆ ಮಾಡುತ್ತಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಸತ್ಯನಾರಾಯಣ ರಾಜು ವಿಚಾರಣೆ ವೇಳೆ ಮುತ್ತು ಶಿವ ಮತ್ತು ಕಣಾತಲ ವಾಸುದೇವ ರೆಡ್ಡಿ ಎಂಬ ಇಬ್ಬರ ಹೆಸರು ಬಾಯಿಬಿಟ್ಟಿದ್ದನು. ಇವರಿಬ್ಬರು ದುಬೈನಲ್ಲಿ ಆಪರೇಟರ್ ಮಾಡುತ್ತಿದ್ದರು. ಇಬ್ಬರ ಸಂಪೂರ್ಣ ಮಾಹಿತಿ ಪಡೆದು ಲುಕ್ ಔಟ್ ನೋಟೀಸ್ ಜಾರಿ ಮಾಡಿದ್ದೇವು. ಲುಕ್‌ಔಟ್ ಜಾರಿ ಬಳಿಕ ಮುತ್ತು ಶಿವನನ್ನು ಮೂರು ತಿಂಗಳ ಹಿಂದೆ ಬಂದಿಸಿದ್ದೆವು. ಎರಡು ದಿನದ ಹಿಂದೆ ದೆಹಲಿಯಿಂದ ದುಬೈಗೆ ಹೋಗುವಾಗ ವಾಸುದೇವ ರೆಡ್ಡಿಯನ್ನು ಬಂಧಿಸಿದ್ದೇವೆ ಎಂದು ಹೇಳಿದರು.

ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಗೂಂಡಾ ಕಾಯ್ದೆಯಡಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೂಪಿ, ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದನು. ಅನಿಲ್ ಕುಮಾರ್ ರೆಡ್ಡಿ ಸ್ಪ್ಯಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು.

ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಾಗಿವೆ. ಈ ಹಿನ್ನಲೆಯಲ್ಲಿ ಆರೋಪಿಯನ್ನು ಬಳ್ಳಾರಿ ಜೈಲಿನಲ್ಲಿಡಲು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ನೋಡಿ: ತುಮಕೂರು ರಸ್ತೆಯ ತಾಳೇಕೇರಿ ಬಳಿ ಭೀಕರ ಅಪಘಾತ Janashakthi Media

Donate Janashakthi Media

Leave a Reply

Your email address will not be published. Required fields are marked *