ಹಿಜಾಬ್ ಪ್ರಕರಣ : ಬಿ.ಜಿ. ರಾಮಕೃಷ್ಣಗೆ ನೀಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ

ಬೆಂಗಳೂರು: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ರನ್ನು  ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ.

ಶಾಲಾ ಶಿಕ್ಷಣ ಇಲಾಖೆಯು ರಾಮಕೃಷ್ಣ ಸೇರಿದಂತೆ ರಾಜ್ಯದ ಪದವಿಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು (ಮತ್ತೊಬ್ಬರು ಮೈಸೂರು ಜಿಲ್ಲೆ ಹುಣಸೂರಿನ ಎ. ರಾಮೇಗೌಡ) ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಪಟ್ಟಿಯನ್ನು ಮಂಗಳವಾರ ರಾತ್ರಿ  ಬಿಡುಗಡೆ ಮಾಡಿತ್ತು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ ಹಿಜಾಬ್‌ ವಿವಾದದಲ್ಲಿ ರಾಮಕೃಷ್ಣ ಹೆಸರು ತಳಕು ಹಾಕಿಕೊಂಡಿತ್ತು. ಹಿಜಾಬ್‌ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕಾಲೇಜು ಗೇಟ್‌ ಹೊರಗೆ ನಿಲ್ಲಿಸಿದ್ದರು.

ಇದನ್ನೂ ಓದಿ: ಬಂಜಾರ ಸಂಸ್ಕೃತಿ ಮತ್ತು ಕಲೆ ದೇಶದಲ್ಲಿಯೇ ವಿಶಿಷ್ಠವದುದು – ಡಾ.ಟಿ.ಎಂ. ಭಾಸ್ಕರ್

ಇದು ವಿವಾದದ ಸ್ವರೂಪ ಪಡೆದು, ಇತರೆ ಜಿಲ್ಲೆಗಳಿಗೂ ಹಬ್ಬಿತ್ತು. ಕೊನೆಗೆ ಬಿಜೆಪಿ ಸರ್ಕಾರ ಶಾಲಾ–ಕಾಲೇಜುಗಳ ಒಳಗೆ ಹಿಜಾಬ್‌ ಧರಿಸುವುದನ್ನು ನಿಷೇಧಿಸಿತ್ತು. ಪ್ರಶಸ್ತಿ ಪಟ್ಟಿ ಪ್ರಕಟವಾದ ನಂತರ, ರಾಮಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅವರನ್ನು ಕೋಮುವಾದಿ ಎಂದು ಹಲವರು ಟೀಕಿಸಿದ್ದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ 20 ಪ್ರಾಥಮಿಕ ಶಾಲಾ ಶಿಕ್ಷಕರು, 11 ಪ್ರೌಢಶಾಲಾ ಶಿಕ್ಷಕರು, ಎಂಟು ಪಿಯು ಉಪನ್ಯಾಸಕರು ಹಾಗೂ ಇಬ್ಬರು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿತ್ತು. ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಮಕೃಷ್ಣ ಅವರನ್ನು ಬಿಟ್ಟು ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ನೋಡಿ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಜ್ವರ, ವಹಿಸಬೇಕಾದ ಎಚ್ಚರಿಕೆಗಳು – ಡಾ. ಶಾಲಿನಿ Janashakthi Media

Donate Janashakthi Media

Leave a Reply

Your email address will not be published. Required fields are marked *