ಕಾರು ತಾಯಿದ್ದಲ್ಲ ಅವರ ಸ್ನೇಹಿತೆಯದ್ದು | ಸೂರಜ್ ರೇವಣ್ಣ

ಬೆಳಗಾವಿ: ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ, ಡಿಕ್ಕಿ ಹೊಡೆದಿದ್ದರ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿರುವ ಸೂರಜ್ ರೇವಣ್ಣ ಅವರು ಅದು ನನ್ನ ತಾಯಿಯ ಕಾರು ಅಲ್ಲ ಅವರ ಸ್ನೇಹಿತೆಯದ್ದು ಎಂದು ಹೇಳಿದ್ದಾರೆ. ಕಾರು 

ಈ ಘಟನೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲನೆಯದಾಗಿ ಶುಕ್ರವಾರ ನಡೆದಿರುವ ಘಟನೆಯದು ಅಲ್ಲಿ ನನ್ನ ತಾಯಿ ಅವರ ಸ್ನೇಹಿತರ ಗಾಡಿಯಲ್ಲಿ ಸಾಲಿಗ್ರಾಮದಿಂದ  ದೊಡ್ಡವರ ಕಾರ್ಯಕ್ರಮಕ್ಕೆ ಪ್ರಯಾಣ ಮಾಡ್ತಾ ಇದ್ರೂ ಆ ಸಮಯದಲ್ಲಿ ಮಧ್ಯಪಾನ ಮಾಡಿ ತಾನೇ ರಾಂಗ್‌ ಸೈಡ್‌ನಲ್ಲಿ ಬಂದು ಆ ವ್ಯಕ್ತಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪೋಲಿಸರ ತನಿಖೆಯಿಂದ ಸಾಬೀತಾಗಿದೆ ಎಂದರು.

ಇದನ್ನೂ ಓದಿ:ಸಾಯೋಕೆ ನನ್ನ 1.5 ಕೋಟಿ ರೂ.ಕಾರೇ ಆಗಬೇಕಿತ್ತಾ| ಸವಾರನ ಮೇಲೆ ದರ್ಪ ತೋರಿದ ಭವಾನಿ ರೇವಣ್ಣ, ವಿಡಿಯೋ ವೈರಲ್

ಏನಿದು ಘಟನೆ:

ಮೈಸೂರು ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನಿಗೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಅವರು ದರ್ಪ ತೋರಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಡಿಸೆಂಬರ್‌3 ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ, ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಕಾರು 

ಈ ವೇಳೆ ಕೆಂಡಾಮಂಡಲಗೊಂಡ ಭವಾನಿ ರೇವಣ್ಣ ಅವರು ಕಾರಿನಿಂದ ಇಳಿದು, ಬೈಕ್‌ ಸವಾರನಿಗೆ ಮನಬದಂತೆ ಬೈದಿದ್ದಾರೆ. ವಿಡಿಯೋದಲ್ಲಿ ಭವಾನಿ ರೇವಣ್ಣ ಅವರು ಕಾರಿನಿಂದ ಇಳಿದು ಬಂದು ಬೈಕ್ ಸವಾರನ ಆರೋಗ್ಯ ವಿಚಾರಿಸಿಲ್ಲ. ಬದಲಿಗೆ ಹಿಗ್ಗಾಮುಗ್ಗಾ ಬೇದಿದ್ದು,  ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ಟು ಹಾಕ್ರೋ ಈ ಗಾಡಿನ ಎಂದು ಹೇಳಿರುವುದು ಕಂಡು ಬಂದಿದೆ.

ಬಳಿಕ ವಾಹನದ ಮುಂಭಾಗ ಡ್ಯಾಮೇಜ್‌ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು, ಬೈಕ್‌ ಸವಾರನ ಮೊಬೈಲ್‌ ಕಸಿದುಕೊಂಡು ಬೈಕ್‌ ಕೀ ಕಿತ್ತುಕೊಂಡರು. ” ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್‌ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ರೂ.50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸ್ಥಳೀಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಅನಿತಾ ಕುಮಾರಸ್ವಾಮಿ ರಾಜಕೀಯ ಮಾಡಿ ಸಾಧಿಸುವುದು ಏನೂ ಇಲ್ಲ : ಹೆಚ್‌ಡಿಕೆ

ಅವನು (ಬೈಕ್‌ ಸವಾರ) ಸತ್ತೋಯ್ತಾನೆ ಅಂತ ಅವನ ಬಗ್ಗೆ ಯೋಚನೆ ಮಾಡ್ತಾ ಇದ್ದೀಯಲ್ಲಾ, ಒಂದೂವರೆ ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?’ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

‘ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ಹರಿಹಾಯ್ದಿದ್ದಾರೆ.

ಇದು ಯಾವ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುತ್ತೆ. ಗಾಡಿ ಸೀಜ್‌ ಮಾಡಿಸು. ಈ ಗ್ರಾಮ ಎಸ್‌ಐ ಬರೋಕೆ ಹೇಳಿ ಎಂದು ಹೇಳಿದ್ದು, ಬೈಕ್‌ ಸವಾರ ಮತ್ತು ಹಿಂಬದಿ ಸವಾರನ ಫೋಟೋವನ್ನು ಕ್ಲಿಕ್ಕಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಘಟನೆ ಬಳಿಕ ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂಬಂಧ ಬೈಕ್‌ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಾರು 

ಈ ನಡುವೆ ಘಟನೆಯ 15 ನಿಮಿಷಯಗಳ ಸಂಪೂರ್ಣ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಅಪಘಾತದ ಬಳಿಕ ವಾಹನ ಸವಾರನ ಆರೋಗ್ಯ ವಿಚಾರಿಸದೇ ಕಾರಿನ ಬಗ್ಗೆ ಯೋಚಿಸಿದ ಭವಾನಿ ರೇವಣ್ಣ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

ವಿಡಿಯೋ ನೋಡಿ:ಚಳಿಗಾಲದ ಅಧಿವೇಶನ ಬೆಳಗಾವಿ 2023| ಡಿಸೆಂಬರ್‌ 04 | ಭಾಗ 01 Live #wintersession2023

Donate Janashakthi Media

Leave a Reply

Your email address will not be published. Required fields are marked *