ರಾಯಪುರ: ಭೂಕುಸಿತ ಮತ್ತು ಭೀಕರ ಮಳೆಗೆ ಹಾನಿಗೊಳಗಾದ ಹಿಮಾಚಲ ಪ್ರದೇಶಕ್ಕೆ 11 ಕೋಟಿ ಆರ್ಥಿಕ ನೆರವು ನೀಡುವುದಾಗಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಘೋಷಿಸಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದರು.
ಗುರುವಾರ ಭೂಪೇಶ್ ಬಘೇಲ್ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸಖ್ವಿಂದರ್ ಸಿಂಗ್ ಸುಖು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ,ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದು,ಪರಿಸ್ಥಿತಿಯನ್ನು ಎದುರಿಸಲು ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ಮೃತರ ಸಂಖ್ಯೆ 74ಕ್ಕೆ ಏರಿಕೆ
ಹಿಮಾಚಲ ಪ್ರದೇಶ ಸರ್ಕಾರಕ್ಕೆ ಛತ್ತೀಸ್ಗಢದ ಜನರ ಪರವಾಗಿ 11 ಕೋಟಿ ಹಣವನ್ನು ವಿಪತ್ತಿನ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿಗಾಗಿ ಬಿಡುಗಡೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ,
ಭಾರೀ ಮಳೆಯಾಗುತ್ತಿದ್ದು ಶಿಮ್ಲಾ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ.ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು ಸಾವಿನ ಸಂಖ್ಯೆ 74ಕ್ಕೆ ಏರಿದೆ ಕಂಡಿದ್ದು ಶಿಮ್ಲಾದಲ್ಲಿ 21 ಸಾವುಗಳು ಸಂಭವಿಸಿವೆ ಎಂದು ಹಿಮಾಚಲ ಪ್ರದೇಶದ ಅಧಿಕಾರಿಗಳು ಹೇಳಿದ್ದಾರೆ