ಆರ್‌ಎಸ್‌ಎಸ್‌ ಶಿಕ್ಷಣದ ಮೇಲೆ ನಿಯಂತ್ರಣ ಸಾಧಿಸಿದರೆ ದೇಶವೇ ನಾಶ: ರಾಹುಲ್‌ ಗಾಂಧಿ

ವದೆಹಲಿ: ಆರ್‌ಎಸ್‌ಎಸ್‌ ತನ್ನ ಸಂಪೂರ್ಣ ನಿಯಂತ್ರಣವನ್ನು ಶಿಕ್ಷಣ ವ್ಯವಸ್ಥೆಯ ಮೇಲೆ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ನಿಯಂತ್ರಣ

ಇಂಡಿಯಾ ಕೂಟದ ಅಂಗಸಂಸ್ಥೆಯಾದ ವಿದ್ಯಾರ್ಥಿಗಳ ಸಂಘಟನೆ ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಸಿದ ರಾಹುಲ್‌, ‘ನಮ್ಮ ಕೂಟದಲ್ಲಿ ಸೈದ್ಧಾಂತಿಕ ಭಿನ್ನತೆಗಳಿರಬಹುದು. ಆದರೆ ದೇಶದ ಶಿಕ್ಷಣ ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದರು.

ಇದನ್ನೂ ಓದಿ: ಭಾರತಕ್ಕೆ ಸುರಕ್ಷಿತವಾಗಿ ಮರಳಿದ ಗ್ಯಾಬೊನ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದ 21 ಹಕ್ಕಿ-ಪಿಕ್ಕಿ ಜನಾಂಗದವರು

ಇದೇ ವೇಳ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳು ಸಂಘದ ಪ್ರಾಬಲ್ಯ ಹೊಂದಿದ್ದಾರೆ. ಮುಂದೆ ರಾಜ್ಯಗಳ ವಿವಿಗಳ ಕುಲಪತಿಗಳನ್ನೂ ಆರ್‌ಎಸ್‌ಎಸ್‌ ಶಿಫಾರಸಿನಂತೆಯೇ ನೇಮಿಸಲಾಗುವುದು. ಇದನ್ನು ತಡೆಯಬೇಕು’ ಎಂದು ಕರೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ಸಿಎಂ ಇಂಡಿಯಾ ಕೂಟದ ಭಾಗವಾದ ಎಂ.ಕೆ.ಸ್ಟಾಲಿನ್‌ ಸರ್ಕಾರ ಈ ಹಿಂದೆ ಹೇಳಿತ್ತು.

ಇದನ್ನೂ ನೋಡಿ: ಸದನದಲ್ಲಿ ‘ಹನಿ ಟ್ರ್ಯಾಪ್’ ಸದ್ದು! – ಮೀನಾಕ್ಷಿ ಬಾಳಿ, ಕೆ.ಎಸ್. ವಿಮಲಾ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *