ಚಿತ್ರದುರ್ಗ: ಕೋರ್ಟ್ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಆದೇಶ ಹೊರಡಿಸಿದೆ. ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣ ಹಿನ್ನೆಲೆ ಚಿತ್ರದುರ್ಗದ 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣ ಆರೋಪ ಎದುರಿಸುತ್ತಿದ್ದ ಮುರುಘಾ ಶರಣರನ್ನು ಚಿತ್ರದುರ್ಗ ಜೈಲಿನಲ್ಲಿರಿಸಲಾಗಿತ್ತು. ಒಮ್ಮೆ ಬೇಲ್ ಪಡೆದು ಹೊರ ಬಂದಿದ್ದರು. ಮತ್ತೆ ಅವರು ಎರಡನೇ ಬಾರಿಗೆ ಜೈಲು ಸೇರಿದ್ದರು. ಇದೀಹ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆಗೆ ಆದೇಶ ಹೊರಡಿಸಿದೆ.
ಸಾಕ್ಷ್ಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಬಿಡುಗಡೆಗೆ ಆದೇಶ ನೀಡಲಾಗಿದೆ. ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಸಾಕ್ಷ್ಯ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರಿಂ ಕೋರ್ಟ್ ಆದೇಶಿಸಿತ್ತು. ಇದೀಗ ಸಾಕ್ಷ್ಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರವಾಸಿಗರ ಪ್ರಯಾಣದ ವೇಳೆ ಚಿರತೆಯೊಂದು ಬಸ್ ಮೇಲೆ ಎಗರಿ ಆತಂಕ
ಸಂತ್ರಸ್ತೆಯರಿಬ್ಬರು ಸೇರಿ 12ಜನ ಸಾಕ್ಷ್ಯಗಳ ವಿಚಾರಣೆ ಪೂರ್ಣವಾಗಿದ್ದು, ಕೋರ್ಟ್‌ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ಬಳಿಕ ಮುರುಘಾಶ್ರೀ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಬಿಡುಗಡೆ ಆದೇಶ ಹೊರಬೀಳುತ್ತಿದ್ದಂತೆ ಶ್ರೀಗಳು ಜೈಲಿನೊಳಗೆ ಹೋಗುವಾಗ ಕ್ಯಾಮೆರಾ ಕಂಡು ಮುಗುಳ್ನಕ್ಕರು. ಇನ್ನು ಜೈಲು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ದಾವಣಗೆರೆಯ ವಿರಕ್ತ ಮಠಕ್ಕೆ ಮುರುಘಾ ಶರಣರು ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ನೋಡಿ: ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು – ಸಚಿವ ದಿನೇಶ್ ಗುಂಡೂರಾವ್