ತಮ್ಮ‌ಆಸಕ್ತಿ ರಾಜಕಾರಣವಾದರೂ ಆಯ್ಕೆ ಶಿಕ್ಷಣ ಕ್ಷೇತ್ರ ಎಂದ ಡಿಕೆಶಿ

ಬೆಂಗಳೂರು : ತಮ್ಮ ತಮ್ಮ‌ಆಸಕ್ತಿ ರಾಜಕಾರಣವಾದರೂ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಓದಿ SSLC ಪರೀಕ್ಷೆಯ ಮೊದಲ ರ‌್ಯಾಂಕ್ ಪಡೆದ ಅಂಕಿತಾ 5 ಲಕ್ಷ, 3ನೇ ಸ್ಥಾನ ಪಡೆದ ನವನೀತ್ ಗೆ 2 ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು‌.

ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ ಆಕೆಯ ಪೋಷಕರು ಮತ್ತು ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು.

ಇದನ್ನು ಓದಿ : ನಾಲ್ಕನೇ ಹಂತ: ಅಲ್ಲಲ್ಲಿ ಅಹಿತಕರ ಘಟನೆ, ಕೆಲವೆಡೆ ಹೊಡೆದಾಟ, ಬಿಜೆಪಿ ಅಭ್ಯರ್ಥಿ ವಿರುದ್ಧವೂ ಪ್ರಕರಣ ದಾಖಲು

ಈ ಸಂದರ್ಭದಲ್ಲಿ, ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಹೊಂದಿರುವುದಾಗಿ ಹೇಳಿದರು.

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

ಇದನ್ನು ನೋಡಿ : ಸರ್ಕಾರಿ ಶಾಲೆಗಳ ಬಗ್ಗೆ ಅಂಕಿತಾ ಮಾತುಗಳು Janashakthi Media

Donate Janashakthi Media

Leave a Reply

Your email address will not be published. Required fields are marked *