ಮೊದಲ ಹಂತದ ಮತದಾನಕ್ಕೆ ಇಂದು ತೆರೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಏಪ್ರಿಲ್‌ 26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಈ ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಕ್ಷೇತ್ರಗಳಿಗೆ ಬಹಿರಂಗ ಪ್ರಚಾರಕ್ಕೆ ಇಂದು ಬುಧವಾರ ಸಂಜೆ ತೆರೆ ಬೀಳಲಿದ್ದು, ನಾಳೆ ಗುರುವಾರದಿಂದ ಮನೆಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ.

ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವಂತೆ ನಾವು ಒತ್ತಾಯಿಸಿದ್ದರೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ: ಖಾರವಾಗಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಸೋಮವಾರ ಚುನಾವಣಾ ಕಣ ಅಂತಿಮಗೊಂಡಿತ್ತು. ಮಂಗಳವಾರದಿಂದ ಪ್ರಚಾರ ಬಿರುಸು ಪಡೆದಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಘಟಾನುಘಟಿ ನಾಯಕರು ಶುಕ್ರವಾರದಿಂದ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸಜ್ಜಾಗಿದ್ದಾರೆ. ಇನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ಕೊಂಡೊಯ್ಯುವಾಗ ಜಾಗರೂಕರಾಗಿರಬೇಕು. ಏಕೆಂದರೆ, ಬೂತ್‌ಗಳ ಆವರಣದಲ್ಲಿಮೊಬೈಲ್ ಬಳಕೆಗೆ ನಿರ್ಬಂಧವಿರುತ್ತದೆ.

ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ ಅಲ್ಲದೇ . ಮತದಾರರು ತಮ್ಮ ಮತ ಚಲಾಯಿಸಲು ಹೋಗುವ ಮೊದಲು ತಮ್ಮ ಫೋನ್‌ಗಳನ್ನು ಇಡಲು ವಿಶೇಷ ಸ್ಥಳದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿಂದೆ ಮತದಾನ ಮಾಡುವಾಗ ಫೋಟೋ ಅಥವಾ ವೀಡಿಯೋ ಮಾಡಿ ಸಿಕ್ಕಿಬಿದ್ದ ನಿದರ್ಶನಗಳೂ ಇವೆ. ಹಾಗಾಗಿ ಮೊಬೈಲ್ ಫೋನ್ ಗಳನ್ನು ಇಡಲು ಚುನಾವಣಾ ಸಿಬ್ಬಂದಿ ಟೇಬಲ್ ಬಳಿ ಟ್ರೇ ಇಡಲು ನಿರ್ಧರಿಸಲಾಗಿದೆ. ಟ್ರೇಗೆ ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಇರಲಿದ್ದಾರೆ. ಇನ್ನು ಮೊಬೈಲ್‌ ಫೋನ್‌ಗಳನ್ನು ಮತದಾನ ಸಂದರ್ಭದಲ್ಲಿ ಸೈಲೆಂಟ್‌ ಮೋಡ್ನಲ್ಲಿ ಇಡಬೇಕಾಗಿದೆ.

ಇದನ್ನೂ ನೋಡಿ: ಚಾಮರಾಜನಗರ ಲೋಕಸಭಾ ಕ್ಷೇತ್ರ: ಬಿಜೆಪಿ ಎರಡನೇ ಬಾರಿ ಗೆಲ್ಲುತ್ತಾ ? ಮರಳಿ ಅಧಿಕಾರ ಸ್ಥಾಪಿಸುತ್ತಾ ಕಾಂಗ್ರೆಸ್?!

Donate Janashakthi Media

Leave a Reply

Your email address will not be published. Required fields are marked *