ʼರಾಮಮಂದಿರ ಉದ್ಘಾಟನೆʼಗೆ ಹೋಗುವವರಿಗೆ ಸರ್ಕಾರ ರಕ್ಷಣೆ ನೀಡಬೇಕು; ಬಿ.ಕೆ ಹರಿಪ್ರಸಾದ್

ಬೆಂಗಳೂರು:ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಏಕೆಂದರೆ ಗೋಧ್ರಾ ದುರಂತದ ರೀತಿಯಲ್ಲಿ ಏನಾದರೂ ಸಂಭವಿಸಬಹುದುʼ ಎಂದು  ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಮಮಂದಿರ

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಈ ಬಗ್ಗೆ ನಮಗೆ ಮಾಹಿತಿ ಸಿಗುತ್ತಿದೆ. ಇದರ ಮಾಹಿತಿ ಇದ್ದೇ ಈ ಮಾತನ್ನು ಹೇಳುತ್ತಿದ್ದೇನೆ ಎನ್ನುವ ಮೂಲಕ ಗಂಭೀರವಾದ ಮಾಹಿತಿಯನ್ನು ನೀಡಿದ್ದಾರೆ.ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮವಾಗಿ ಉಳಿದಿಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು ಎಂದರು. ರಾಮಮಂದಿರ

ಇದನ್ನು ಓದಿ : ಕೊರೊನಾದ ಉಪ ರೂಪಾಂತರಿ JN.1 ಅಲೆ ಮುಗಿದಿದೆ; ಭಯ ಬೇಡ ಎಂದ ತಜ್ಞರು 

ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕರ ಸೇವಕನ ಬಂಧನ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಕೇಸ್ ಇದೆ. ಅವರು ಕಾನೂನು ಬಾಹಿರ ಅಪರಾಧ ಮಾಡಿದ್ದಾರೆ ಎಂದು ವಿವರಿಸಿದರು.

ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತ ಗೊತ್ತಿದೆ. ಬಿಜೆಪಿಯವರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ಶಾಂತಿ ಕದಡುವ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲೇಬೇಕು. 30 ವರ್ಷ ಅವರನ್ನು ಬಿಟ್ಟಿದ್ದೇ ತಪ್ಪು. ಬಾಬರಿ ಮಸೀದಿ ಧ್ವಂಸ ಮಾಡಿದ್ದು ಅಪರಾಧವೇ. ಎಲ್ ಕೆ ಅಡ್ವಾಣಿಯವರ ಮೇಲೆ ಇರುವ ಕೇಸೇ ಇನ್ನೂ ಕ್ಲಿಯರ್ ಆಗಿಲ್ಲ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದರು.

 

Donate Janashakthi Media

Leave a Reply

Your email address will not be published. Required fields are marked *