ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮಂಗಳವಾರಕ್ಕೆ ಅಕ್ಟೋಬ್ರ 8 ಕ್ಕೆ ಮುಂದೂಡಿಕೆ ಆದೇಶ ನೀಡಿ ಆಘಾತ ಉಂಟುಮಾಡಿದೆ. ಬಿಜೆಪಿ
ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ವಿಶೇಷ ನ್ಯಾ. ಸಂತೋಷ್ ಗಜಾನನ ಭಟ್ ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶವನ್ನು ನೀಡಿದ್ದಾರೆ.
ಇದನ್ನೂ ಓದಿ: ಬಾಹ್ಯಾಕಾಶದ ಗಗನಯಾತ್ರಿಗಳ ಮಾನಸಿಕ ಯೋಗಕ್ಷೇಮಕ್ಕೆ ನಿಮ್ಹಾನ್ಸ್ ಪರಿಹಾರ ಒದಗಿಸಬೇಕು: ಇಸ್ರೋ ಅಧ್ಯಕ್ಷ
ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯೋರ್ವರು ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿದ್ದರು. ತದನಂತರದಲ್ಲಿ ಮುನಿರತ್ನ ವಿರುದ್ಧದ ಪ್ರಕರಣಗಳನ್ನು ರಾಜ್ಯ ಸರ್ಕಾರವು ವಿಶೇಷ ತನಿಖಾ ದಳಕ್ಕೆ (SIT) ತನಿಖೆಗೆ ವಹಿಸಿ ಆದೇಶ ನೀಡಿತ್ತು. ಇನ್ನು ಮುನಿರತ್ನ ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣವನ್ನು ಎದುರಿಸುತ್ತಿದ್ದಾರೆ.
ಇದನ್ನೂ ನೋಡಿ: ನಮ್ಮನ್ನು ಖಾಯಂ ಮಾಡಿ, ಸಮಾನ ವೇತನ ನೀಡಿ – ಗುತ್ತಿಗೆ ಕಾರ್ಮಿಕರ ಪ್ರತಿಭಟನೆ