ದಂಪತಿ ವಾಸಿಸುತ್ತಿದ್ದ ಮನೆ ಧ್ವಂಸ; ದಯಾಮರಣ ಅನುಮತಿಗಾಗಿ ರಾಷ್ಟ್ರಪತಿಗೆ ಪತ್ರ

ಮಂಗಳೂರು: ಕಡಬ ತಾಲೂಕಿನಲ್ಲಿ ವೃದ್ದ ದಂಪತಿ ವಾಸಿಸುತ್ತಿದ್ದ ಮನೆಯನ್ನು ಅಧಿಕಾರಿಗಳು ಧ್ವಂಸ ಮಾಡಿದ್ದಾರೆ. ಈ ಘಟನೆಯಿಂದಾಗಿ ದಂಪತಿಗಳು ತೀವ್ರ ಆಘಾತಕ್ಕೀಡಾಗಿದ್ದಾರೆ. ಭೂಮಿ ವಿವಾದದಿಂದಾಗಿ ಮನೆ ಕಳೆದುಕೊಂಡಿರುವ ದಂಪತಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿದ್ದಾರೆ.

ದಯಾಮರಣ ಕೋರಿ ವೃದ್ಧ ದಂಪತಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು (ನ.13) ಏಕಾಏಕಿ ಧ್ವಂಸಗೊಳಿಸಲಾಗಿದೆ. ಇದರಿಂದ ಕಂಗಾಲು ಆಗಿರುವ ದಂಪತಿ ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಮನೆ ಧ್ವಂಸಕ್ಕೆ ಕಾರಣ

ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯವರು ದಂಪತಿ ಕೂಲಿ ಕೆಲಸ ನಿಮಿತ್ಯ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಆಗಮಿಸಿ ಇಲ್ಲೇ ವಾಸಗಿದ್ದಾರೆ. ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1 ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ವೈದ್ಯರ ನಿರ್ಲಕ್ಷ ; ರೋಗಿ ಸಾವು – ಸಾರ್ವಜನಿಕರ ಪ್ರತಿಭಟನೆ

ದಂಪತಿಗೆ ಯಾವುದೆ ಪಿತ್ರಾರ್ಜಿತ ಆಸ್ತಿ ಇಲ್ಲ. ಆದ್ದರಿಂದ ಸರ್ಕಾರಿ ಜಾಗ 123/1 ರಲ್ಲಿನ ಕಾಪಿನಬಾಗಿಲು ಎಂಬಲ್ಲಿ ವಾಸವಾಗಿದ್ದಾರೆ. ದಂಪತಿ ನಿತ್ಯ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.

ವೃದ್ಧ ದಂಪತಿ ಸರ್ಕಾರಿ ಜಾಗದಲ್ಲಿ ಇದ್ದಾರೆ ಎಂಬ ಕಾರಣಕ್ಕಾಗಿ ಬೆಳ್ತಂಗಡಿ ತಾಲೂಕಿನ ಅಶೋಕ್ ಆಚಾರ್ಯ ಎಂಬವರು ಇವರನ್ನು ಒಕ್ಕಲೆಬ್ಬಿಸುವ ಸಲುವಾಗಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಸರ್ಕಾರಿ ಜಾಗ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣ ತಣ್ಣಗಾಗಿತ್ತು.

ಆದರೆ, ಇದೀಗ ಅಧಿಕಾರಿಗಳು ಮನೆಯ ವಸ್ತುಗಳನ್ನು ಹೊರಗೆ ಎಸೆದು ಏಕಾಏಕಿ ಮನೆ ದ್ವಂಸ ಮಾಡಿದ್ದಾರೆ. ವೃದ್ಧ ದಂಪತಿ ಕಣ್ಣೀರು ಹಾಕಿದರೂ, ಕರಗದ ಅಧಿಕಾರಿಗಳು ಮನೆ ತೆರವುಗೊಳಿಸಿದ್ದಾರೆ. ಕಡಬ ತಹಶೀಲ್ದಾರ್ ಪ್ರಭಾಕರ 2)ಜೂರ, ಆರ್ ಐ ಪೃಥ್ವಿರಾಜ್, ಉಪ್ಪಿನಂಗಡಿ ಪೊಲೀಸರ ನೇತೃತ್ಯದಲ್ಲಿ ಮನೆ ತೆರವು ಮಾಡಲಾಗಿದೆ.

ಹೀಗಾಗಿ, ವೃದ್ದ ದಂಪತಿ “ಒಂದು ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಅಥವಾ ಅದಕ್ಕೆ ಸಾಧ್ಯವಿಲ್ಲ ಎಂಬುವುದಾದರೆ ದಯಮಾಡಿ ವೃದ್ಧರಾದ ನಮಗೆ ದಯಾಮರಣ ಅಥವಾ ಇನ್ನಾವುದೇ ರೀತಿಯಲ್ಲಿ ಒಳ್ಳೆಯ ಮರಣಕ್ಕೆ ಅವಕಾಶವನ್ನು ನೀಡಿ” ಎಂದು ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ನೋಡಿ: ದಲತರಿಂದ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು Janashakthi Media

Donate Janashakthi Media

Leave a Reply

Your email address will not be published. Required fields are marked *