ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಬ್ಬರನ್ನು ವಶಕ್ಕೆ ಪಡೆದಿದೆ. ಇಬ್ಬರನ್ನು
ಎನ್ಐಎ ಅಧಿಕಾರಿಗಳು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಟೌನ್ ನಿವಾಸಿಯಾಗಿರುವ ಸಾಫ್ಟ್‌ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ನನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ವಶಕ್ಕೆ ಪಡೆದ ಎನ್‌ಐಎ
ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್‌ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಹಣ ಸಹಾಯ ಮಾಡಿದ್ದು ಕೆಲವು ಡಿಜಿಟಲ್ ಸಾಕ್ಷ್ಯಗಳು ಎನ್‌ಐಎಗೆ ದೊರೆತಿವೆ. ಕೆಫೆ ಸ್ಫೋಟದ ನಂತರ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನವಿದೆ. ಈ ಎಲ್ಲ ವಿಭಾಗಗಳಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ನೋಡಿ: ಪೆನ್‌ಡ್ರೈವ್ ಲೈಂಗಿಕ ಹಗರಣ : ಸಮಾಲೋಚನಾ ಗೋಷ್ಠಿ