1991ರ ಕಾಯ್ದೆ ಪರಿಣಾಮಕಾರಿ ಜಾರಿ: ಓವೈಸಿ ಮನವಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು

ನವದೆಹಲಿ: 1991ರ ಪೂಜಾ ಸ್ಥಳಗಳ ಕಾಯ್ದೆ-1991ರ ಪರಿಣಾಮಕಾರಿ ಅನುಷ್ಠಾನ ಕೋರಿ, ಕಾನೂನು ಜಾರಿಗೊಳಿಸುವಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜನವರಿ 2ರಂದು ವಿಚಾರಣೆಗೆ ನಿಗದಿಪಡಿಸಿದೆ.

1947ರ ಆಗಸ್ಟ್ 15ರಂದು ಅಸ್ತಿತ್ವದಲ್ಲಿದ್ದ ಪೂಜಾ ಸ್ಥಳಗಳ ಧಾರ್ಮಿಕ ಸ್ವರೂಪವನ್ನು ಕಾಯ್ದುಕೊಳ್ಳುವಂತೆ 1991ರ ಪೂಜಾ ಸ್ಥಳಗಳ ವಿಶೇಷ ವಿಬಂಧನೆಗಳು ಕಾಯ್ದೆ ಹೇಳುತ್ತದೆ. ಕಾನೂನು

ಇದನ್ನೂ ಓದಿ: ಚಾಮರಾಜನಗರ : ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು – ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಪೀಠವು ಓವೈಸಿಯ ಅರ್ಜಿ ವಿಚಾರಣೆಗೆ ಸಮ್ಮತಿಯನ್ನು ನೀಡಿದೆ. ಈ ಪ್ರಕರಣದ ವಿಚಾರಣೆಯು ಫೆಬ್ರವರಿ 17ರಂದು ನಡೆಯಲಿದೆ. ಓವೈಸಿ ಪರ ಹಾಜರಾದ ವಕೀಲ ನಿಝಾಮ್ ಪಾಷಾ ಈ ಕುರಿತ ಮನವಿಯನ್ನು ಪರಿಗಣಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ವಕೀಲ ಫಝೈಲ್ ಅಹಮ್ಮದ್ ಆಯ್ಯೂಬಿ ಮೂಲಕ ಡಿಸೆಂಬರ್ 17ರಂದು ಉಮ್ಮಸಿ ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ಮನವಿ ಸಲ್ಲಿಸಿದರು. 1991ರ ಪೂಜಾ ಸ್ಥಳಗಳ ಕಾಯ್ದೆ ಸಂಬಂದ ಸಲ್ಲಿಸಲಾಗಿರುವ ಹಲವು ಅರ್ಜಿಗಳು ಕುರಿತು ಡಿಸೆಂಬರ್ 12ರಂದು ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ಪೀಠವು, ಮಸೀದಿ ಅಥವಾ ದರ್ಗಾ ಸೇರಿದಂತೆ ಧಾರ್ಮಿಕ ಸ್ಥಳಗಳ ವಿವಾದದ ಕುರಿತಂತೆ ಕೆಳ ನ್ಯಾಯಾಲಯಗಳು ಯಾವುದೇ ಆದೇಶ ನೀಡದಂತೆ ನಿರ್ಬಂಧ ವಿಧಿಸಿತ್ತು.

ಇದನ್ನೂ ನೋಡಿ: ನಿರಂಜನ -100| ಬುದ್ಧಿ ಭಾವ ಬದುಕು – ಬಂಜಗೆರೆ ಜಯಪ್ರಕಾಶ Janashakthi Media

Donate Janashakthi Media

Leave a Reply

Your email address will not be published. Required fields are marked *