ಬೆಂಗಳೂರು| ಕಾಲ್ತುಳಿತಕ್ಕೆ ಕಾರಣ ಉಚಿತ ಟಿಕೆಟ್‌ – ಕಮಿಷನರ್ ಬಿ. ದಯಾನಂದ್

ಬೆಂಗಳೂರು: ಮೊದಲ ಬಾರಿಗೆ ಆರ್‌ಸಿಬಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮ ವೀಕ್ಷಿಸಲು ಆರ್‌ಸಿಬಿ ಅಭಿಮಾನಿಗಳು ಬಂದಾಗ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಕಮಿಷನರ್ ಬಿ ದಯಾನಂದ ಸೇರಿದಂತೆ ಹಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಯಿತು, ಇದೀಗ ಅಮಾನತುಕೊಂಡಿರುವ ಬೆಂಗಳೂರು ಕಮಿಷನರ್ ಬಿ. ದಯಾನಂದ್ ವಿಚಾರಣೆಗೆ ಹಾಜರಾಗಿದ್ದೂ, ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಿರ್ಣಾಯಕ ಹಂತ ತಲುಪಿದ ಭೂ ಸ್ವಾಧೀನ ವಿರೋಧಿ ಹೋರಾಟ

ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ವಿಚಾರಣೆಗೆ ಹಾಜರಾದ ದಯಾನಂದ್‌ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು.ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಇಷ್ಟೆಲ್ಲ ಅವಾಂತರ ನಡೆದಿದೆ ಎಂದು ಹೇಳಿಕೆ ದಾಖಲಿಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಬಲಿಯಾದ 11 ಜನರ ಸಾವಿನ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂದು ಇಡೀ ದಿನ ಓಪನ್ ಡೇ ವಿಚಾರಣೆ ನಡೆಯಲಿದ್ದು ತನಿಖೆ ಕೊನೆಯ ಭಾಗವಾಗಿ ಸಾರ್ವಜನಿಕರು ಭಾಗಿಯಾಗಲಿದ್ದಾರೆ. ಕಾಲ್ತುಳಿತ ಸಂಬಂಧ ಈವರೆಗೆ 140 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದ್ದು ಮುಂದಿನ ವಾರ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ನೋಡಿ: ಘೋಷಿತ ತುರ್ತು ಪರಿಸ್ಥಿತಿ ಮತ್ತು ಅಘೋಷಿತ ತುರ್ತು ಪರಿಸ್ಥಿತಿಯ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ತೆರೆದಿಡುವ ಪುಸ್ತಕ

Donate Janashakthi Media

Leave a Reply

Your email address will not be published. Required fields are marked *