ಉಪಚುನಾವಣೆ: ಮತ ಎಣಿಕೆಗೆ ಸಕಲ ಸಿದ್ಧತೆ, ನಾಳೆ ಫಲಿತಾಂಶ

Please follow and like us:
ಬೆಂಗಳೂರು: ನ22 ರಂದು, ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಆಯಾ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಜೊತೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಂಡಿವೆ. ಕ್ಷೇತ್ರ

ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ 

ನಾಳೆ ಮತ ಎಣಿಕೆಯು ರಾಮನಗರದ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಮೂರು ಕೊಠಡಿಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಬೆಳಗ್ಗೆ 6.45ಕ್ಕೆ ಮತಯಂತ್ರಗಳನ್ನಿಟ್ಟಿರುವ ಸ್ಟ್ರಾಂಗ್ ರೂಂ ತೆರೆಯಲಾಗುವುದು. 7.30ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಪ್ರಾರಂಭಿಸಲಾಗುವುದು. ಬೆಳಗ್ಗೆ 8 ಗಂಟೆಗೆ ಇವಿಎಂ ಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಒಟ್ಟಾರೆ 20 ಸುತ್ತುಗಳಲ್ಲಿ ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ಡಿಸಿ ಮಾಹಿತಿ ನೀಡಿದರು.

ಇದನ್ನೂ ಓದಿ: ಫ್ಯಾಷನ್‌ಗೆಂದು ಯುವಕ  ಧರಿಸಿ ಬಂದಿದ್ದ ಟೋರ್ನ್ ಜೀನ್ಸ್ ಪ್ಯಾಂಟ್‌ಗೆ ಹೊಲಿಗೆ ಹಾಕಿದ ಪುಂಡರು; ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,886 (ಶೇ.88.81) ಮತಗಳು ಚಲಾವಣೆಗೊಂಡಿದೆ. 14 ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿಯೊಂದು ಟೇಬಲ್‌ಗಳಿಗೂ ಎರಡು ರಾಜಕೀಯ ಪಕ್ಷದ ಏಜೆಂಟರುಗಳಿಗೆ ಪಾಸ್ ನೀಡಲಾಗಿದೆ. ಪಕ್ಷೇತರದ ಏಜೆಂಟರುಗಳಿಗೂ ಸಹ ಪಾಸ್‌ಗಳನ್ನು ನೀಡಲಾಗಿದೆ. ಮತ ಎಣಿಕೆಗೆ 69 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 250 ಜನ ಏಜೆಂಟರುಗಳು ಇರುತ್ತಾರೆ. ಜಿಲ್ಲೆಯಾದ್ಯಂತ ಶನಿವಾರ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಶಿಗ್ಗಾಂವಿ ಉಪಚುನಾವಣೆ ಮತ ಎಣಿಕೆಗೆ ಸಿದ್ಧತೆ: ಹಾವೇರಿ ತಾಲೂಕಿನ ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಉಪಚುನಾವಣೆ ಮತ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ 14 ಟೇಬಲ್​​ಗಳನ್ನು ಇವಿಎಂ ಎಣಿಕೆಗಾಗಿ ನಿಗದಿಪಡಿಸಲಾಗಿದೆ. ಪ್ರತಿ ಟೇಬಲ್​​ಗೆ ಓರ್ವ ಎಣಿಕೆ ಮೇಲ್ವಿಚಾರಕ, ಓರ್ವ ಸಹಾಯಕರು ಹಾಗೂ ಓರ್ವ ಎಣಿಕೆ ಆಬ್ಸರ್ವರ್​ಅನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ನಾಲ್ವರು ಡಿವೈಎಸ್​ಪಿ, ಒಂಬತ್ತು ಸಿಪಿಐ ಮತ್ತು 25 ಪಿಎಸ್ಐಗಳು ಸೇರಿದಂತೆ 500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್​ಗೆ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾಹಿತಿ ನೀಡಿದ್ದಾರೆ.

ಸಂಡೂರು ಚುನಾವಣೆಯ ಮತ ಎಣಿಕೆ: ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ರಾಜೇಶ್ ಹೆಚ್.ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ನೋಡಿ: ಆರ್‌.ಬಿ. ಮೋರೆ | ಈ ಪುಸ್ತಕ ದೃಶ್ಯಗಳನ್ನು ಕಟ್ಟಿಕೊಟ್ಟಿದ್ದರಿಂದ ಸರಳವಾಗಿ ಅನುವಾದಿಸಿದೆ – ಅಬ್ದುಲ್ ರೆಹಮಾನ ಪಾಷಾ

Please follow and like us:
Donate Janashakthi Media

Leave a Reply

Your email address will not be published. Required fields are marked *