ವಿವಿ ಹಾಸನದಲ್ಲೆ ಉಳಿಸಲು ಆಗ್ರಹಿಸಿ 3ನೇ ದಿನವು ಧರಣಿ ಮುಂದುವರಿಕೆ

ಹಾಸನ: ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರಿಸುವಂತೆ ಆಗ್ರಹಿಸಿ ವಿಶ್ವ ವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಮೂರನೇ ದಿನ ಬುಧವಾರವು ಕೂಡ ಹೇಮಗಂಗೋತ್ರಿ ಕಾಲೇಜು ಬಳಿ ತಮ್ಮ ಧರಣಿ ಮುಂದುವರೆಸಿದರು. ಈ ವೇಳೆ ಹಸಿರು ಭೂಮಿ ಪ್ರತಿಷ್ಠಾನ, ಕರವೇ ಮತ್ತು ರೈತ ಸಂಘ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ಉಳಿಸಲು

ಉಪಮುಖ್ಯಮಂತ್ರಿಗಳ ನೇತೃತ್ವದ ಸಂಪುಟ ಉಪಸಮಿತಿಯ ಕಳೆದ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲ್ಪಟ್ಟಿದ್ದ ಎರಡು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ತೀರ್ಮಾನಿಸಿದೆ ಎಂಬ ವರದಿಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಹೊಸದಾಗಿ ಶುರುವಾಗಿದ್ದ ಹಾಸನ ವಿಶ್ವವಿದ್ಯಾಲಯವನ್ನು ಸಹ ಮುಚ್ಚ ಬೇಕಾಗಿರುವುದು ಈ ಜಿಲ್ಲೆಯ ಜನರಿಗೆ ನಿರಾಸೆಯಾಗಿದೆ. ಇದರಿಂದ ಇಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವು ದುಬಾರಿಯಾಗಲಿದೆ. ಉಳಿಸಲು

ಪ್ರಸ್ತುತ ನಮ್ಮ ಜಿಲ್ಲೆಯ ಹಾಸನ ವಿಶ್ವವಿದ್ಯಾಲಯದ ವ್ಯಾಪ್ತಿಗೆ 56 ಕಾಲೇಜುಗಳು ಸೇರಿದ್ದು, ಒಟ್ಟು 29 ಸಾವಿರ ವಿದ್ಯಾರ್ಥಿಗಳು (ಸ್ನಾತಕ ಮತ್ತು ಸ್ನಾತಕೋತ್ತರ) ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ- ಮುನಿಯಪ್ಪ

ಹಾಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚದೆ ಮುಂದುವರಿಸಬೇಕು ಹಾಗೂ ಹಾಸನ ವಿಶ್ವವಿದ್ಯಾನಿಲಯದ ನಿರ್ವಹಣೆಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಸರ್ಕಾರದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು ಪಕ್ಕದ ಜಿಲ್ಲೆ ಅಥವಾ ರಾಜಧಾನಿಗೆ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯಲು ಹೋಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಹಾಸನ ವಿಶ್ವವಿದ್ಯಾಲಯವನ್ನು ಇಲ್ಲೇ ಉಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹಸಿರು ಭೂಮಿ ಪ್ರತಿಷ್ಠಾನದ ಸಂಸ್ಥಾಪಕರಾದ ಆರ್.ಪಿ. ವೆಂಕಟೇಶ್ ಮೂರ್ತಿ, ಕರವೇ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್. ರೈತ ಸಂಘದ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್,ಕೆ.ಪಿ.ಆ.ರ್.ಎಸ್. ಜಿಲ್ಲಾಧ್ಯಕ್ಷ ಹೆಚ್.ಆರ್. ನವೀನ್ ಕುಮಾರ್, ಡಾ. ಎಸ್.ಜೆ. ಮಹೇಶ್, ಡಾ. ಪುಷ್ಪಾವತಿ, ಡಾ. ಪುಟ್ಟರಾಜಪ್ಪ, ಡಾ. ಅಶೋಕ್, ಡಾ. ಪ್ರೇಮಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ನೋಡಿ: ಡಾ. ಬಂಜಗೆರೆ ಜಯಪ್ರಕಾಶ್‌ ಜೊತೆ ಸಂವಾದ Janashakthi Media

Donate Janashakthi Media

Leave a Reply

Your email address will not be published. Required fields are marked *