ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದು ಮಾಡುವಂತೆ ಕೋರ್ಟ್‌ ಮೊರೆ ಹೋದ ಎಸ್‌ಐಟಿ

ಬೆಂಗಳೂರು: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಇಂದು ಶುಕ್ರವಾರ  ಮಹತ್ವದ ದಿನವಾಗಿದ್ದು, ಅರ್ಜಿ ವಿಚಾರಣೆ ಇಂದು ಶುಕ್ರವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರೇವಣ್ಣಗೆ ಮತ್ತೆ ಭೀತಿ ಎದುರಾಗಿದೆ.

ಮಹಿಳೆ ಕಿಡ್ನ್ಯಾಪ್ ಕೇಸ್ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದು ಮಾಡುವಂತೆ ಎಸ್ಐಟಿ ಕೋರ್ಟ್ ಮೊರೆ ಹೋಗಿದೆ.

ಇದನ್ನೂ ಓದಿ: ಬಿಎಂಟಿಸಿಯ ಇ.ವಿ ವಾಹನಗಳಲ್ಲಿ ಕೇರಳದವರಿಗೆ ಉದ್ಯೋಗ; ಸಿದ್ದು, ಅಶೋಕ್ ಟ್ವೀಟ್ ವಾರ್

ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣಗೆ ಜಮೀನು ನೀಡಿರುವುದು ಸರಿಯಲ್ಲ. ಹೀಗಾಗಿ ರೇವಣ್ಣ ಜಾಮೀನು ರದ್ದುಗೊಳಿಸುವಂತೆ ಎಸ್ ಐಟಿ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ರನ್ನು ಬಂಧಿಸಿರುವ ಎಸ್ ಐಟಿ, ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಿದೆ. ಇನ್ನೊಂದೆಡೆ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕೂಡ ಇಂದು ಹೊರಬೀಳಲಿದೆ.

ಇದನ್ನೂ ನೋಡಿ: ಏಂಗೆಲ್ಸ್ 200 : ಪ್ರಕೃತಿಯ ಗತಿತಾರ್ಕಿಕತೆ ಪುಸ್ತಕ ಬಿಡುಗಡೆ – Janashakthi Media

Donate Janashakthi Media

Leave a Reply

Your email address will not be published. Required fields are marked *