ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ಮುಖ್ಯಮಂತ್ರಿ ಸಿದ್ಜರಾಮಯ್ಯ ವಲಯವಾರು ವಿಂಗಡಣೆ ಮಾಡಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆಯ ಆರಂಭದಲ್ಲೇ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್ನ ಒಟ್ಟು ಗಾತ್ರ 4,09,549 ಕೋಟಿ ರೂ. ಎಂದು ತಿಳಿಸಿದರು. ಬೆಂಗಳೂರು
ಇದನ್ನೂ ಓದಿ: 9 ವಿಶ್ವವಿದ್ಯಾಲಯ ಮುಚ್ಚಲ್ಲ: ಬಿಎಸ್ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ.
ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ನೋಡಿ: ನಾವು ನೀರು ಬಿಡ್ತಿವಿ, ಊರಿನ ಕಸ ತೆಗಿತೀವಿ ಆದ್ರೆ ನಮಗೆ ಪಿಂಚಣಿ ಇಲ್ಲ, ಕನಿಷ್ಠ ಕೂಲಿ ಇಲ್ಲ – ಎಂ.ಬಿ. ನಾಡಗೌಡ