ಬೆಂಗಳೂರು: ಬರಪರಿಹಾರದಲ್ಲಿ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಕಾನೂನು ಹೋರಾಟ ಮುಂದುವರೆಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಕರ್ನಾಟಕ ರಾಜ್ಯಕ್ಕೆ ಬರಪರಿಹಾರಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ದ್ರೋಹ ಎಸಗಿದೆ. ರಾಜ್ಯ ಭೀಕರ ಪರಿಹಾರಕ್ಕೆ ತುತ್ತಾದಾಗಲೂ ರಾಜ್ಯದ ಪಾಲಿನ ಬರ ಪರಿಹಾರವನ್ನು ಕೇಂದ್ರ ಕೊಡಲಿಲ್ಲ. ನಾವು ನಮ್ಮ ಪಾಲು ಕೇಳಲು ಪದೇ ಪದೇ ಕೇಂದ್ರಕ್ಕೆ ಹೋಗಿ ಮನವಿ ಮಾಡಿದರೂ ಕೊಡಲಿಲ್ಲ.
ನಾನೇ ಪ್ರಧಾನಿ ಮತ್ತು ಅಮಿತ್ ಶಾ ಅವರಿಗೆ ಮನವಿ ಕೊಟ್ಟರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಯಿತು ಎಂದು ಬರಪರಿಹಾರದ ವಿಷಯದಲ್ಲಿ ಕಾನೂನಿನ ಮೊರೆ ಹೋಗಬೇಕಾಗಿದ್ದ ಸರ್ಕಾರದ ಅನಿವಾರ್ಯತೆಯನ್ನು ವಿವರಿಸಿದರು.
ಅಮಿತ್ ಶಾ, ಮೋದಿ, ನಿರ್ಮಲಾ ಸೀತಾರಾಮನ್ ಪದೇ ಪದೇ ಕರ್ನಾಟಕ ರಾಜ್ಯಕ್ಕೆ ಬಂದು ಬರಪರಿಹಾರದ ವಿಚಾಋದಲ್ಲಿ ಸುಳ್ಳು ಹೇಳಿ ಹೋಗಿದ್ದಾರೆ.ಆದರೆ, ಸುಪ್ರೀಂಕೋರ್ಟ್ ಎದುರು ಮಾತ್ರ ಎರಡು ವಾರ ಸಮಯ ಕೇಳಿದರು. ಕೇಂದ್ರದ ಅಸಹಕಾರದ ನಡುವೆಯೂ ನಾವು ರಾಜ್ಯದ ಜನತೆಯ ಕೈ ಬಿಡಲಿಲ್ಲ. ಪರಿಹಾರ ಕೊಟ್ಟೆವು.
ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ. ರೈತರಿಗೆ ಮಾತ್ರ ಪರಿಹಾರದ ಹಣ ಮೀಸಲಿಟ್ಟಿದ್ದೇವೆ. ಸುಪ್ರೀಂಕೋರ್ಟ್ ಗಟ್ಟಿಯಾಗಿ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾಕೀತು ಮಾಡಿದ ಬಳಿಕ ನಾವು ಕೇಳಿದ್ದರಲ್ಲಿ 19% ಮಾತ್ರ ಪರಿಹಾರ ಕೊಟ್ಟಿದ್ದಾರೆ. ಇನ್ನೂ ಬರಬೇಕಾದ ಬಾಕಿ ಕೊಟ್ಟಿಲ್ಲ. ನಾವು ಬಾಕಿ ಪರಿಹಾರಕ್ಕಾಗಿ ಕಾನೂನು ಹೋರಾಟ ಮುಂದುವರೆಸುವುದಾಗಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪುನರುಚ್ಚರಿಸಿದರು.
ಇದನ್ನೂ ನೋಡಿ: ಪೆನ್ಡ್ರೈವ್ ಲೈಂಗಿಕ ಹಗರಣ : ಸಮಾಲೋಚನಾ ಗೋಷ್ಠಿ