ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಗೆ ಎಂದಿಗೂ ದ್ರೋಹ ಆಗುವುದಿಲ್ಲ ಎಂದು ಹೇಳಿದರು.
6ನೇ ವೇತನ ಆಯೋಗವನ್ನು ನಮ್ಮ ಸರ್ಕಾರವೂ ಜಾರಿಗೆ ತಂದಿದೆ ಎಂದು ತುಮಕೂರಿನಲ್ಲಿ ಮಾತನಾಡಿದ ಅವರು, ಹೇಳಿದರು.
ಇದನ್ನೂ ಓದಿ: “ಸವೆದ ಪಯಣ” ದ ಸವಿಯಾದ ಮೆಲುಕು
ಎಲ್ಲವನ್ನೂ ಒಂದೇ ದಿನದಲ್ಲಿ ಜಾರಿಗೆ ತರಲು ಸಾಧ್ಯವಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನಕ್ಕೆ 18 ಸಾವಿರ ಕೋಟಿ ಹಾಗೂ ಒಪಿಎಸ್ ಅನುಷ್ಠಾನಕ್ಕೆ ನೂರಾರು ಕೋಟಿ ರೂ. ಬೇಕು. ಅದಕ್ಕಾಗಿ ತಾಳ್ಮೆಯಿಂದಿರಿ ಎಂದು ಹೇಳಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಅತಿ ಹೆಚ್ಚು ತೆರಿಗೆ ಕಟ್ಟುತ್ತಿವೆ. ಇದಕ್ಕೆ ಅನುಗುಣವಾಗಿ ನಮಗೆ ವಾಪಸ್ ಬರುತ್ತಿಲ್ಲ ಎಂಬ ವಾದವನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದೇವೆ. ನಮ್ಮಲ್ಲಾದ ಬದಲಾವಣೆಯಿಂದ ಕರ್ನಾಟಕ ಶಕ್ತಿಯುತವಾಗಿದ್ದು, ಇತರೆ ರಾಜ್ಯಗಳಿಗೂ ಶಕ್ತಿ ನೀಡಲು ಈ ಹಣ ಬಳಕೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಸಂಬಂಧಿಸಿದಂತೆ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರಕ್ಕೆ ಬರಲಿದೆ. ನಾನು ಕೂಡ ಶಿಕ್ಷಣ ಸಚಿವರು ಮತ್ತು ಸಿಎಂ ಸಿದ್ಧರಾಮಯ್ಯ ಗಮನಕ್ಕೆ ತಂದಿದೇನ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಗೌರವಧನ ಸಾಕಾಗುವುದಿಲ್ಲ. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಓಪಿಎಸ್ ಜಾರಿಗೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಇದನ್ನೂ ನೋಡಿ: ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ Janashakthi Media