ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿ ಇರಕೂಡದು. ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ವಸಂತನಗರದ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಆಯೋಗದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್– ಒಂದು ಬಾರಿ ನಗದು ಸಹಾಯಧನ ವಿತರಣೆ ಹಾಗೂ ಪುನರ್ವಸತಿ ಸಮಾವೇಶ ಸಮಾರಂಭ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಇದನ್ನು ಓದಿ : ವಿಪಕ್ಷಗಳ ಜೊತೆ ನಂಟಿದೆ ಎಂದು ಒಪ್ಪಲು ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ | ನ್ಯಾಯಾಲಯಕ್ಕೆ ತಿಳಿಸಿದ ಸಂಸತ್‌ ಭದ್ರತಾ ಲೋಪ ಪ್ರಕರಣದ ಆರೋಪಿಗಳು

ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿಗೆ ಅವಕಾಶವೇ ಇಲ್ಲ. ಯಾರಾದರೂ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ವರಿಸಿದರು.

ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ ಈ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಿ ಎಂದು ಕರೆ ನೀಡಿದರು.

ಇದನ್ನು ನೋಡಿ : ಗದ್ದರ್‌ ನೆನಪು : ದೇಹದೊಳಗಿನ ರಕ್ತ ಒಂದೇ… ದುಡಿವ ಜನರ ಬಾಧೆ ಒಂದೇ… Janashakthi Media

Donate Janashakthi Media

Leave a Reply

Your email address will not be published. Required fields are marked *