ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ: ‘ಕಲಿಯುಗದ ಕುಡುಕ’ನ ಪಯಣ ಅಂತ್ಯ!

ಬೆಂಗಳೂರು :  ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು (ಅಕ್ಟೋಬರ್ 13, 2025) ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜು 

ನಿನ್ನೆ ಸಂಭವಿಸಿದ ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.

ಇದನ್ನೂ ಓದಿ : ಕನ್ನಡ ರಾಜ್ಯೋತ್ಸವ: ಪ್ರಶಸ್ತಿಯನ್ನು ನೀಡಲು ಆಯ್ಕೆ ಸಮಿತಿ ರಚನೆ ರಾಜು

ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.

ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ರಾಜು ತಾಳಿಕೋಟೆ  ಅವರು ಧಾರವಾಡದ ರಂಗಾಯಣದ ನಿರ್ದೇಶಕರಾಗಿದ್ದರು. ಬಿಗ್ ಬಾಸ್‌-7 ರ ಸ್ಪರ್ಧಿ ಕೂಡ ಆಗಿದ್ದರು. ರಾಜು

ಇದನ್ನೂ ನೋಡಿ : CITU 14ನೇ ಜಿಲ್ಲಾ ಸಮ್ಮೇಳನದಲ್ಲಿ ಯೋಗ ಪ್ರದರ್ಶಿಸಿದ ರಾಜ್ಯ ಪ್ರಶಸ್ತಿ ವಿಜೇತೆ ಐಶ್ವರ್ಯ Janashakthi Media

 

Donate Janashakthi Media

Leave a Reply

Your email address will not be published. Required fields are marked *