ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಕಳ್ಳತನ

ದಾವಣಗೆರೆ: ಸೋಮವಾರ ಅಕ್ಟೋಬರ್ 28 ರಂದು ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಕಳ್ಳತನವಾಗಿದೆ. ಕಳ್ಳರು ಬ್ಯಾಂಕ್‌ನಲ್ಲಿದ್ದ 13 ಕೋಟಿ ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ಟೇಟ್

ನ್ಯಾಮತಿ ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್‌ನಲ್ಲಿ ಕಳ್ಳತನವಾಗಿದೆ. ಬ್ಯಾಂಕ್‌ ಲಾಕರ್‌ನ 509 ಬ್ಯಾಗ್‌ಗಳಲ್ಲಿ ಇದ್ದ 13 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬೆರಳಚ್ಚು ತಜ್ಞ ಮತ್ತು ಡಾಗ್ ಸ್ಕ್ಯಾಡ್ ತಂಡ ತಪಾಸಣೆ ನಡೆಸಿತು. ಆದರೆ ಇದುವರೆಗೂ ಒಂದು ಸುಳಿವು ಸಿಕ್ಕಿಲ್ಲ. ಬ್ಯಾಂಕ್ ಹೊರಗೆ, ಒಳಗೆ ಎಲ್ಲ ಕಡೆ ತಡಕಾಡಿದರೂ ಕಳ್ಳರ ಹಜ್ಜೆ ಗುರುತು ಮಾತ್ರ ಪತ್ತೆಯಾಗಿಲ್ಲ.

ಬ್ಯಾಂಕ್‌ ಜನ ವಸತಿ ಕಡಿಮೆ ಇರುವ ಪುದೇಶದಲ್ಲಿದೆ. ಎಸ್‌ಬಿಐ ಬ್ಯಾಂಕ್ ಸುತ್ತ ಗಿಡಗಂಟೆಗಳು ಬೆಳೆದಿವೆ. ಕಳ್ಳರು, ಸೋಮವಾರ ರಾತ್ರಿ ಬ್ಯಾಂಕ್‌ನ ಕಿಟಕಿಯನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಲಾಕರ್ ಅನ್ನು ಕೂಡ ಗ್ಯಾಸ್ ಕಟ‌ ನಿಂದ ಕಟ್ ಮಾಡಿ ಕಳ್ಳತನ ಮಾಡಿದ್ದಾರೆ.‌

ಇದನ್ನೂ ಓದಿ: ಪಕ್ಕದಲ್ಲೆ ಮಗನ ಶವ ಇದ್ದರೂ ಅರಿಯದ ಅಂಧ ಪೋಷಕರು

ಬೆರಳಚ್ಚು ಗುರುತು ಸಿಗದೆ ಹ್ಯಾಂಡ್ ಗೌಸ್ ಹಾಕಿಕೊಂಡು ಕಳ್ಳತನ ಮಾಡಿದ್ದಾರೆ. ಶ್ವಾನಕ್ಕೆ ವಾಸನೆ ಗ್ರಹಿಕೆಯಾಗಬಾರದೆಂದು ಬ್ಯಾಂಕ್ ತುಂಬೆಲ್ಲ ಖಾರದ ಪುಡಿ ಹಾಕಿ ಪರಾರಿಯಾಗಿದ್ದಾರೆ. ಜೊತೆಗೆ ಬ್ಯಾಂಕ್‌ನ ಸಿಸಿ ಟಿವಿಯ ಡಿವಿಆರ್ ಅನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.

ಈ ಹಿಂದೆ ಹೊನ್ನಾಳಿಯ ಅರಕೆರೆ ಗ್ರಾಮದ ಕರ್ನಾಟಕ ಬ್ಯಾಂಕ್‌ನಲ್ಲಿ ಕಳ್ಳತನ ನಡೆದಿತ್ತು. 10 ಕೋಟಿ ಮೌಲ್ಯದ ಚಿನ್ನ ಕಳುವು ಆಗಿತ್ತು. ಈಗ ನ್ಯಾಮತಿಯ ಎಸ್‌ಬಿಐ ಬ್ಯಾಂಕ್‌ನಲ್ಲಿ 13 ಕೋಟಿ ಮೌಲ್ಯದ ಚಿನ್ನ ಕಳುವು ಆಗಿದೆ.

ಒಟ್ಟಾರ ಎಸ್‌ಬಿಐ ಬ್ಯಾಂಕ್ ಕಳ್ಳತನ ಪ್ರಕರಣ ನಿಜಕ್ಕೂ ಅಲ್ಲಿನ ಗ್ರಾಹಕರ ನಿದ್ದೆಗೆಡಿಸಿದೆ. ನಮ್ಮ ಆಭರಣ ಮತ್ತು ದುಡ್ಡಿಗೆ ಭದ್ರತೆ ಯಾರು ಎಂಬ ಆತಂಕ ಗ್ರಾಹಕರಲ್ಲಿ ಮೂಡಿದೆ. ಆದಷ್ಟೂ ಬೇಗ ಕಳ್ಳರನ್ನು ಪೊಲೀಸರು ಪತ್ತೆ ಹಚ್ಚಲಿ ಎಂದು ಗ್ರಾಹಕರು ಒತ್ತಾಯಿಸುತ್ತಿದ್ದಾರ.

ಇದನ್ನೂ ನೋಡಿ: ಭ್ರಷ್ಟ ರಾಜಕೀಯ ಹಾಗೂ ಅಧಿಕಾರಶಾಹಿಗೆ ಅಮಾಯಕ ಕಟ್ಟಡ ಕಾರ್ಮಿಕರು ಬಲಿ Janashakthi Media

Donate Janashakthi Media

Leave a Reply

Your email address will not be published. Required fields are marked *