ಕೊಪ್ಪಳ: ಕ್ರಿಶ್ಚಿಯನ್ ಸೇರಿದಂತೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ನಂತರ ಆತನಿಗೆ ಮೂಲ ಜಾತಿಯ ಆಧಾರದಲ್ಲಿ ದೊರೆಯುತ್ತಿದ್ದ ಸರ್ಕಾರಿ ಸೌವಲತ್ತುಗಳು ದೊರೆಯಲು ಸಾಧ್ಯವಿಲ್ಲ ಎಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಮತಾಂತರ
ಇದನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಡಿಸಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಅವರು ತಮ್ಮ ಧರ್ಮವನ್ನೇ ಬದಲಾಯಿಸಿಕೊಂಡಿರುವುದರಿಂದ ಅದೇ ಧರ್ಮದಲ್ಲಿ ಗುರುತಿಸಿಕೊಳ್ಳಬೇಕಾಗುತ್ತದೆ. ಆ ಧರ್ಮದಲ್ಲಿದ್ದುಕೊಂಡು ಹಿಂದಿನ ತಮ್ಮ ಜಾತಿಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ; ವಿಚಾರಣೆಗೆ ಒಪ್ಪಿಗೆ
ಜಾತಿಗಳ ಮುಂದೆ ಕ್ರಿಶ್ಚಿಯನ್ ಧರ್ಮ ಸೇರಿಸಿರುವುದು ಆಯೋಗ ಚರ್ಚಿಸಿ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಇದಕ್ಕೆ ಬೇಡಿಕೆ ಬಂದಿರುವುದರಿಂದ ಹಾಗೆ ಮಾಡಲಾಗಿದೆಯೇ ಹೊರತು ಸರ್ಕಾರದಿಂದಲ್ಲ. ಎಲ್ಲ ರೀತಿಯಿಂದಲೂ ಬರೆದುಕೊಳ್ಳುವುದಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲದಕ್ಕೂ ಅವಕಾಶವಿದೆ. ಯಾರಿಗೆ ಯಾವುದು ಬೇಕು ಅದರಲ್ಲಿ ತಮ್ಮ ಜಾತಿ ಮತ್ತು ಧರ್ಮ ಭರ್ತಿ ಮಾಡುತ್ತಾರೆ. ಇದೆಲ್ಲವನ್ನು ನಂತರ ಆಯೋಗ ಪರಿಶೀಲಿಸುತ್ತದೆ ಎಂದು ತಿಳಿಸಿದರು.
ಬಿಜೆಪಿ ನಾಯಕರಿಗೆ ಹುಚ್ಚು ಹಿಡಿದಿದ್ದರಿಂದ ಧರ್ಮ-ಧರ್ಮಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆತುರದ ನಿರ್ಧಾರ ಕೈಗೊಳ್ಳುತ್ತಾರೆ. ಪರಾಮರ್ಶೆ ಮಾಡುವುದಿಲ್ಲ. ಜನರು ಬೆಳಗ್ಗೆ-ರಾತ್ರಿ ಏನು ತಿನ್ನಬೇಕೆಂದು ಇವರು ನಿರ್ಧರಿಸುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಯಾರು ಏನೇ ಹೇಳಲಿ, ತಮ್ಮ ಜಾತಿ ಮತ್ತು ಧರ್ಮವನ್ನೇ ಜನರು ಬರೆಯಿಸಲಿ ಎಂದರು.
ಇದನ್ನೂ ನೋಡಿ: ನಾಲ್ಕು ದಶಕಗಳಿಂದ ಧರ್ಮಸ್ಥಳದಲ್ಲಿ ಕೊಲೆ, ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿವೆ – ಡಾ. ಕೆ.ಪ್ರಕಾಶ್ Janashakthi
