ಎಸ್‌ಪಿಪಿ ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ: ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಆರೋಪದಡಿ ನಟ ದರ್ಶನ್‌ ಬಂಧನದ ಪ್ರಕರಣದಲ್ಲಿ ಎಸ್‌ಪಿಪಿ ರನ್ನು ಬದಲಾವಣೆ ಮಾಡುವಂತೆ ತಮ್ಮ ಮೇಲೆ ಯಾವ ಸಚಿವರದ್ದಾಗಲೀ, ಶಾಸಕರದ್ದಾಗಲೀ ಯಾರದ್ದೂ ಒತ್ತಡವಿಲ್ಲ. ತಮ್ಮ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ  ಸತ್ಯಕ್ಕೆ ದೂರವಾದುದು.  ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿ.ಕೆ.ಶಿವಕುಮಾರ್

ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್.ಪಿ.ಪಿ. ಬದಲಾವಣೆಯ ಪ್ರಸ್ತಾವನೆ ತಮ್ಮ ಮುಂದಿಲ್ಲ ಎಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಿ – ತಜ್ಞರ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *