ಕೇಂದ್ರ ಸರ್ಕಾರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲವೆಂದು ರಾಜ್ಯಸಭೆಗೆ ಸ್ಪಷ್ಟಪಡಿಸಿದೆ.
2020ರ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ತ್ರಿಭಾಷಾ ಸೂತ್ರದ ಅನುಷ್ಠಾನದಲ್ಲಿ ರಾಜ್ಯಗಳು ಮತ್ತು ವಿದ್ಯಾರ್ಥಿಗಳ ಆಯ್ಕೆಗೆ ಆದ್ಯತೆ ನೀಡಲಾಗುವುದು ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ :-ನವದೆಹಲಿ| ಅಂಗಡಿ ವ್ಯಾಪಾರಿಯಿಂದ 80 ಲಕ್ಷ ರೂ ದರೋಡೆ
ಸಿಪಿಐ(ಎಂ) ನಾಯಕ ಡಾ. ಜಾನ್ ಬ್ರಿಟ್ಟಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತ್ರಿಭಾಷಾ ಸೂತ್ರದಲ್ಲಿ ಕನಿಷ್ಠ ಎರಡು ಭಾರತೀಯ ಸ್ಥಳೀಯ ಭಾಷೆಗಳ ಅಧ್ಯಯನವನ್ನು ಒತ್ತಿ ಹೇಳಲಾಗಿದೆ. ಮಕ್ಕಳು ಕಲಿಯುವ ಮೂರು ಭಾಷೆಗಳು ರಾಜ್ಯಗಳು, ಪ್ರದೇಶಗಳು ಮತ್ತು ವಿದ್ಯಾರ್ಥಿಗಳ ಸ್ವತಂತ್ರ ಆಯ್ಕೆಯಾದಾಗಿರುತ್ತವೆ.
6 ಅಥವಾ 7ನೇ ತರಗತಿಯಲ್ಲಿ ವಿದ್ಯಾರ್ಥಿಗಳು ತಮ್ಮ ಭಾಷಾ ಆಯ್ಕೆಯನ್ನು ಬದಲಾಯಿಸಲು ಅವಕಾಶವಿದೆ. ಎನ್‌ಇಪಿ 2020ರ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ಬಯಸುವ ಭಾಷೆಯನ್ನು ಆಯ್ಕೆ ಮಾಡಲು ಸ್ವಾತಂತ್ರ್ಯ ನೀಡುತ್ತದೆ.
ಇದನ್ನು ಓದಿ :-ಶಾಸಕರನ್ನು ಅಪಮಾನಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಯು.ಟಿ. ಖಾದರ್ ಆಗ್ರಹ
ಈ ಸ್ಪಷ್ಟೀಕರಣವು ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಕಳವಳಗಳು ಮತ್ತು ಅಭಿಯಾನಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಬಹುಭಾಷಾವಾದ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸಲು ತ್ರಿಭಾಷಾ ಸೂತ್ರವನ್ನು ಜಾರಿಗೆ ತರುವುದನ್ನು ಮುಂದುವರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.