ಬೆಂಗಳೂರು : ನಟ ವಶಿಷ್ಟ ಸಿಂಹ ಅವರನ್ನು “ನೀರಿದ್ದರೆ ನಾಳೆ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ರಾಜ್ಯದ 15 ಜಿಲ್ಲೆಗಳ 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 525 ಗ್ರಾಮ ಪಂಚಾಯಿತಿಗಳಲ್ಲಿ “ನೀರಿದ್ದರೆ ನಾಳೆ” ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಇಲಾಖೆಯ ಸಚಿವ ಎನ್.ಎಸ್ ಭೋಸರಾಜು ತಿಳಿಸಿದರು. ಬೆಂಗಳೂರು
ವಿಕಾಸಸೌಧದ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಕನ್ನಡ ಚಿತ್ರರಂಗದ ಖ್ಯಾತ ನಟ ವಶಿಷ್ಟ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಇಂದು ವಿಧಾನಸೌಧದ ಬ್ವಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು. ಬೆಂಗಳೂರು
ಇದನ್ನೂ ಓದಿ : ಬೆಂಗಳೂರು | ಅವನು ಎಸೆದ ಚಪ್ಪಲಿ ಗವಾಯಿವರ ಸಮುದಾಯದ ಶ್ರಮ ಸಂಸ್ಕೃತಿ
ನೀರಿದ್ದರೆ ನಾಳೆ ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದು ಮಾಹಿತಿ ನೀಡಿದರು.
ಈ ಹಿಂದೆ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದ ಸಚಿವ ಎನ್.ಎಸ್ ಭೋಸರಾಜು, ನೀರಿದ್ದರೆ ನಾಳೆ – ವಾಟರ್ ಈಸ್ ಫ್ಯೂಚರ್ – ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದೊಂದಿಗೆ… ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು “ನೀರಿದ್ದರೆ ನಾಳೆ” (ನೀರು ಭವಿಷ್ಯ) ಎಂಬ ವಿಶಿಷ್ಟ ರಾಜ್ಯವ್ಯಾಪಿ ಅಭಿಯಾನವನ್ನು ಪ್ರಾರಂಭಿಸುತ್ತಿದೆ.
ಈ ಉಪಕ್ರಮವು ನಮ್ಮ ಸಾಂಪ್ರದಾಯಿಕ ನೀರಿನ ಮೂಲಗಳನ್ನು ಸಂರಕ್ಷಿಸುವುದು, ಅಂತರ್ಜಲವನ್ನು ಪುನರುಜ್ಜೀವನಗೊಳಿಸುವುದು ಮತ್ತು ಜಲ-ಸುರಕ್ಷಿತ ಕರ್ನಾಟಕಕ್ಕಾಗಿ ಸುಸ್ಥಿರ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಸಮರ್ಪಿತವಾಗಿದೆ. ಖ್ಯಾತ ಕನ್ನಡ ನಟ ವಸಿಷ್ಠ ಸಿಂಹ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಮ್ಮ ಜೊತೆ ಕೈಜೋಡಿಸುತ್ತಿರುವುದನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ನಾವೆಲ್ಲರೂ ಒಟ್ಟಾಗಿ ನೀರನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳೋಣ – ಏಕೆಂದರೆ “ನೀರಿದ್ದರೆ ನಾಳೆ – ನೀರು ಭವಿಷ್ಯ” ಎಂದು ತಿಳಿಸಿದ್ದರು. ಈ ಟ್ವೀಟ್ ಅನ್ನು ರೀಶೇರ್ ಮಾಡಿದ್ದ ನಟ ವಸಿಷ್ಠ ಸಿಂಹ, ನೀರಿದ್ದರೆ ನಾಳೆ.. ನೀರಿದ್ದರೆ ನಾವು.. ಎಂದು ಬರೆದುಕೊಂಡಿದ್ದರು.
ಇದನ್ನೂ ನೋಡಿ : ನಮಗೆ 10 ಸಾವಿರ ಪಿಂಚಣಿ ನೀಡಿ – ವಿಕಲಚೇತನರ ಆಗ್ರಹ Janashakthi Media
