ಕೆಲಸದ ಜಾಗಗಳಲ್ಲಿ ಲಿಂಗ ತಾರತಮ್ಯ ಮಾಡಬಾರದು :ಮುಕ್ತ ಮನಸ್ಸಿನಿಂದ ಕೆಲಸ ಮಾಡುವ ವಾತಾವರಣ ಕಲ್ಪಿಸಬೇಕು

ರಾಮನಗರ: ಕೆಲಸ ಮಾಡುವ ಸ್ಥಳಗಳಲ್ಲಿ ಮುಕ್ತ ಮನಸ್ಸಿನಿಂದ ಅವರು ಕೆಲಸ ಮಾಡುವ ಉತ್ತಮ ವಾತಾವರಣ ಕಲ್ಪಿಸಿ ಕೊಡಬೇಕು’  ಲಿಂಗ ತಾರತಮ್ಯ ಮಾಡಬಾರದು. ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಚ್. ಅಣ್ಣಯ್ಯ ಹೇಳಿದರು.

ತಾಲ್ಲೂಕಿನ ಬಿಡದಿಯ ನಾಮ್‌ಧಾರಿ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು–ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ : SIR ಕುರಿತು ಮಾತುಕತೆ: ನ.28ರಂದು ಸಭೆ ನಡೆಸಲು ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಪ್ರತಿಯೊಬ್ಬ ಮಹಿಳೆಯು ಕಾನೂನುಗಳ ಅರಿವಿನೊಂದಿಗೆ ಪ್ರಯೋಜನ ಪಡೆದುಕೊಳ್ಳಬೇಕು’ ‘ಸಂವಿಧಾನದ ಮೂಲಭೂತ ಹಕ್ಕುಗಳಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಅದರಂತೆ, ಮಹಿಳೆಯರು ಕೆಲಸ ಮಾಡುವ ಎಲ್ಲಾ ಸ್ಥಳಗಳಲ್ಲೂ ಮಹಿಳೆಯರಿಗೆ ಸಮಾನವಾದ ನ್ಯಾಯ ದೊರಕಿಸಿ ಕೊಡಲು ಕಾನೂನುಗಳನ್ನು ರಚಿಸಲಾಗಿದೆ. ಎಂದು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್ ಮಾತನಾಡಿ, ‘ಮಹಿಳೆಯರಿಗಾಗಿ ಇರುವ ಕಾನೂನುಗಳ ಅರಿವನ್ನು ಮಹಿಳೆಯರು ಮಾತ್ರವಲ್ಲದೆ ಪುರುಷರು ಕೂಡ ತಿಳಿದುಕೊಳ್ಳಬೇಕು. ಮಹಿಳೆಯರು ಕೆಲಸ ಮಾಡುವ ಸಂಸ್ಥೆಗಳಲ್ಲಿ ಮಹಿಳೆಯರು ಎದುರಿಸುವ ಸಮಸ್ಯೆಗಳು ಹಾಗೂ ಆ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಲು ಕಡ್ಡಾಯವಾಗಿ ಸಮಿತಿ ರಚಿಸಬೇಕು’ ಎಂದು ಹೇಳಿದರು.

‘ತಾವು ಎದುರಿಸುವ ಕಿರುಕುಳ, ದೌರ್ಜನ್ಯ ಹಾಗೂ ಇತರ ಸಮಸ್ಯೆಗಳನ್ನು ಮಹಿಳೆಯರು ಧೈರ್ಯದಿಂದ ಸಮಿತಿ ಮುಂದೆ ಹೇಳಿಕೊಂಡು ದೂರು ಸಲ್ಲಿಸಬಹುದು. ಸಂತ್ರಸ್ತರು ಕಾನೂನು ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ: 15100 ಗೆ ಕರೆ ಮಾಡಿ ಸೂಕ್ತ ಕಾನೂನು ಸಲಹೆಗಳನ್ನು ಪಡೆಯಬಹುದು’ ಎಂದು ಸಲಹೆ ನೀಡಿದರು.

ಹಿರಿಯ ವಕೀಲ ಹಾಗೂ ಮಧ್ಯಸ್ಥಿಕೆಗಾರ ವೆಂಕಟೇಶ್ ಬಿ.ಸಿ ಉಪನ್ಯಾಸ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಎಂ. ಶ್ರೀವತ್ಸ, ಕಾರ್ಯದರ್ಶಿ ತಿಮ್ಮೇಗೌಡ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ನಾಗೇಂದ್ರ ಎಚ್.ಆರ್., ನಾಮ್‌ಧಾರಿ ಸೀಡ್ಸ್ ಪ್ರೈವೇಟ್‌ನ ಪಿಒಎಸ್‌ಎಚ್‌ನ ವ್ಯವಸ್ಥಾಪಕಿ ಹಾಗೂ ಅಧ್ಯಕ್ಷೆ ಕಾವೇರಿ ಸುಬ್ರಮಣಿ, ಮಹಿಳಾ ಕಾರ್ಮಿಕರು ಹಾಗೂ ಇತರರು ಇದ್ದರು.

ಇದನ್ನೂ ನೋಡಿ : ಕರ್ನಾಟಕದ 17 ಭಾಷೆಗಳಲ್ಲಿ ಸಂವಿಧಾನ ಪೀಠಿಕೆ

Donate Janashakthi Media

Leave a Reply

Your email address will not be published. Required fields are marked *