ಬೆಂಗಳೂರು: ಜಾತಿಗಣತಿ ಸ್ವೀಕರಿಸದಂತೆ ತಮ್ಮ ಮೇಲೆ ಒತ್ತಡವಿತ್ತು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೀಟ್ ದಿ ಪ್ರೆಸ್ ಅನ್ನು ಉದ್ದೇಶಿಸಿ ಸಿದ್ದರಾಮಯ್ಯ ಈ ಮಾತನ್ನು ಹೇಳಿದರು.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿ
ಜಾತಿಗಣತಿ ವರದಿ ಸ್ವೀಕರಿಸಬೇಡಿ ಎಂದು ಒತ್ತಡ ಹೇರಿದರು. ಆದರೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದ್ದೇವೆ. ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರನ್ನು ಪತ್ತೆ ಹಚ್ಚಲು ಜಾತಿ ಗಣತಿ,ಸಾಮಾಜಿಕ ಆರ್ಥಿಕ ಸಮೀಕ್ಷೆ ಅತ್ಯಗತ್ಯ. ಹೀಗಾಗಿಯೇ ನಾವು ಜಾತಿಗಣತಿ ಮಾಡಿಸಿ ವರದಿ ಸ್ವೀಕರಿಸಿದೆವು. ಈ ವರದಿ ಯಾವುದೇ ಸಮುದಾಯಕ್ಕೂ ತೊಂದರೆ ಮಾಡುವುದಿಲ್ಲ.
ಮೋದಿ ಆರ್ಥಿಕವಾಗಿ ಹಿಂದುಳಿದವರಿಗಾಗಿ ಈಡಬ್ಲ್ಯೂಎಸ್ ಮೀಸಲಾತಿ ಜಾರಿತಂದರು. ಇಡೀ ದೇಶದಲ್ಲಿ ಮೀಸಲಾತಿಯ ಅನುಕೂಲ ಪಡೆಯದ ಯಾವುದೇ ಜಾತಿ, ವರ್ಗಗಳಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ನೋಡಿ: ಪೆನ್ ಡ್ರೈವ್ ಪ್ರಕರಣ ದಿಕ್ಕು ತಪ್ಪುತ್ತಿದೆ, ಸಾಕ್ಷಿ ನಾಶ ಸಾಧ್ಯತೆ – ವಕೀಲ ಸಿ ಎಚ್. ಹನುಮಂತರಾಯ ಆರೋಪ