ಬೆಂಗಳೂರು: ಈ ವರ್ಷ 2025ರಲ್ಲಿ ರಾಜ್ಯದಲ್ಲಿ ವಾಡಿಕೆಗೂ ಮುನ್ನವೇ ಬಿಸಿಲ ಬೇಗೆಯಿಂದ ಜನರನ್ನು ಕಂಗೆಡಿಸಿದೆ. ಆರಂಭದಿಂದಲೂ ಅಂದರೆ, ಫೆಬ್ರವರಿ ಮಧ್ಯಭಾಗದಲ್ಲೇ ಬೀರು ಬೇಸಿಗೆ ಅನುಭವ ಕರುನಾಡ ಜನರಿಗೆ ಆಗುತ್ತಿದೆ. ಈಗಲೇ ಇಷ್ಟೊಂದು ಬಿಸಿಲು ಅಂದ್ರೇ ಈ ವರ್ಷಬಿಸ ಸರಿಯಾಗಿ ಮಳೆ ಬರುತ್ತೋ ಇಲ್ಲವೋ ಎಂದು ರಾಜ್ಯದ ರೈತರು ಹಾಗೂ ಜನರನ್ನ ತೀವ್ರ ಆತಂಕ ಹುಟ್ಟುವಂತೆ ಮಾಡಿದೆ. ಅಧಿಕ
ಈ ಫೆಬ್ರವರಿಯಲ್ಲೇ ವಾಡಿಕೆಗಿಂತ ಹೆಚ್ಚು ಡಿಗ್ರಿ ಸೆಲ್ಸಿಯಸ್ ಅಧಿಕ ಬಿಸಿಲಿನ ತಾಪಮಾನ ರಾಜ್ಯದಲ್ಲಿ ದಾಖಲಾಗಿದ್ದೂ, ಕಳೆದ ವರ್ಷಕ್ಕಿಂತಲೂ ಈ ವರ್ಷ ಅಧಿಕ ಬಿಸಿಲು, ಮಳೆ, ಚಳಿ ಇರುತ್ತದೆ ಎಂಬ ಮಾಹಿತಿ ಇದೆ. ಭಾರತಕ್ಕೆ ಈ ವರ್ಷ ಮುಂಗಾರು ಮಳೆ ಎಂಟ್ರಿಯಾಗಲಿದ್ದು, ಈ ಕಾರಣಕ್ಕೆ ಮುಂಗಾರು ಕೂಡ ಕಳೆದ ಬಾರಿಗಿಂತ ಉತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಬಿಜೆಪಿಗರು ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿದ್ದಾರೆ: ಕಾಂಗ್ರೆಸ್ ಕಿಡಿ
ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದ್ದು, ಮೇ 10 & ಮೇ 12 ರಿಂದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇನ್ನೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇದನ್ನೂ ನೋಡಿ: ಪ್ರೀತಿಪದಗಳ ಸಹಯಾನಿ ಡಾ. ವಿಠ್ಠಲ ಭಂಡಾರಿ ನೆನಪು Janashakthi Media