ಬೆಂಗಳೂರು: ನ್ಯಾಯಾಧೀಶರ ಮೊಬೈಲನ್ನೇ ಕದಿಯಲು ಪ್ರತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಸ್ತೆಯಲ್ಲಿ ವಾಯುವಿಹಾರ ಮಾಡುತ್ತಿದ್ದ ನ್ಯಾಯಾಧೀಶರ ಮೊಬೈಲ್ ಅನ್ನು ಅಪರಿಚಿತ ವ್ಯಕ್ತಿ ಕಿತ್ತುಕೊಂಡು ಪರಾರಿಯಾಗಿದ್ದು, ಈ ಸಂಬಂಧ ಹೈಗ್ರೆಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಂಗಳೂರು | ಮೊಬೈಲ್ ಹ್ಯಾಕ್: ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಆರ್ಡರ್ ಮಾಡಿ ವಂಚನೆ
ಡಿ.5ರಂದು ರಾತ್ರಿ 9.30ರಲ್ಲಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಮಠದ ಅವರು ಕ್ರೆಸೆಂಟ್ ರಸ್ತೆಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮುಂದೆ ವಾಯುವಿಹಾರ ಮಾಡುವ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ, ಅವರ ಕೈಯಲ್ಲಿದ್ದ 315 ಸಾವಿರ ಮೌಲ್ಯದ ಮೊಬೈಲ್ ಕಿತ್ತುಕೊಂಡು ಹೋಗಿದ್ದಾನೆ.
ನ್ಯಾಯಾಧೀಶರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಪತ್ತೆ ಕಾರ್ಯ ಕೈಗೊಂಡಿದ್ದಾರೆ. ಘಟನೆ ನಡೆದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ : ನೋವು ಮೆಟ್ಟಿ ಬದುಕು ಕಟ್ಟಿಕೊಳ್ಳೊಣ – ಪಪ್ಪೆಟ್ ಜಾನು ಜೊತೆ ಮಾತುಕತೆ Janashakthi Media