ಬೆಂಗಳೂರು: ಕರ್ನಾಟಕದಲ್ಲಿಯೂ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ ಎಂದು ಅವರು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಶಾಲಾ ಮಕ್ಕಳು ಮತ್ತು ಹದಿಹರೆಯದವರ ಮೇಲೆ ಮೊಬೈಲ್ ಫೋನ್’ಗಳ ಪ್ರಭಾವದ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆಯೊಂದನ್ನು ತಿಳಿಸಿದ್ದಾರೆ. ಮಕ್ಕಳ
ಇದನ್ನೂ ಓದಿ : ಸಾಮ್ರಾಜ್ಯಶಾಹಿ ತೊಲಗಿ, ಸಮಾಜವಾದ ಜಾರಿಯಾದರೆ ಶ್ರಮಿಕರಿಗೆ ತಮ್ಮ ಶ್ರಮದ ಪ್ರತಿಫಲ – ಬಸವರಾಜ ಪೂಜಾರ
ಈ ನಿಟ್ಟಿನಲ್ಲಿ ನಾವು ಕೂಡ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದೇವೆ. ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಅಂತರಾಷ್ಟ್ರೀಯ ಸಮಿತಿಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಮಕ್ಕಳ
ಪೋಷಕರ ಒತ್ತಡ: ಮಕ್ಕಳ ಮೊಬೈಲ್ ಚಟದಿಂದಾಗಿ ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಅನೇಕ ಪೋಷಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಪೋಷಕರಿಂದ ಈ ಬಗ್ಗೆ ತೀವ್ರ ಒತ್ತಡ ಇರುವುದನ್ನು ಡಿಸಿಎಂ ಒಪ್ಪಿಕೊಂಡಿದ್ದಾರೆ.
“ಈಗಲೇ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ನೋಡೋಣ, ಮುಂದೇನಾಗುತ್ತೆ ಅಂತ. ತಜ್ಞರ ವರದಿ ಮತ್ತು ಸಾಧಕ-ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸೈಬರ್ ಕ್ರೈಮ್ ಮತ್ತು ಅಶ್ಲೀಲ ಸಾಹಿತ್ಯಕ್ಕೆ ಮಕ್ಕಳು ಬಲಿಯಾಗುತ್ತಿರುವುದನ್ನು ತಡೆಯಲು ಈ ಕಾನೂನು ಜಾರಿಗೆ ತರಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಮತ್ತು ಆನ್ಲೈನ್ ಗೇಮ್ಗಳಿಂದಾಗಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಆತಂಕ ಪೋಷಕರಲ್ಲಿ ಮನೆಮಾಡಿದೆ. ಬೇರೆ ದೇಶಗಳ ಮಾದರಿಯಲ್ಲೇ ರಾಜ್ಯದಲ್ಲೂ ಕಠಿಣ ನಿಯಮ ಜಾರಿಗೆ ಬರುತ್ತಾ? ಡಿಸಿಎಂ ನೀಡಿದ ಈ ಸುಳಿವು ಈಗ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ.
ಇದನ್ನೂ ನೋಡಿ : “ಪಶುಗಳು ಮೇವು ತಿನ್ನುವುದಿಲ್ಲವೇ? ಕಾರಣಗಳೇನು?” | ಡಾ. ಎನ್. ಬಿ ಶ್ರೀಧರ Janashakthi Media
