ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದ ಬಳಿ 3 ಮತ್ತು 7 ವರ್ಷದ ಇಬ್ಬರು ಗಂಡು ಮಕ್ಕಳನ್ನು ದುರುಳರು ನಿರ್ದಯವಾಗಿ ಹಲ್ಲೆ ಮಾಡಿದ ಘಟನೆ ನಗರದಲ್ಲಿ ಚಿಕ್ಕ ಮಕ್ಕಳ ಮೇಲೆ ಅಮಾನವೀಯ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳನ್ನ ವಿಕ್ಟೋರಿಯಾ ಆಸ್ವತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ : ರಾಜ್ಯಪಾಲರ ನಡೆ ಅಸಂವಿಧಾನಿಕ, ಸರ್ವಾಧಿಕಾರಿ ನಡೆ – ಸಿಪಿಐ(ಎಂ) ಪ್ರತಿಭಟನೆ
ಚಿಕ್ಕ ಮಕ್ಕಳು ಎಂಬುದನ್ನೂ ಲೆಕ್ಕಿಸದೇ ಹಲ್ಲೆ ನಡೆಸಿರುವ ಈ ವಿಕೃತ ಕೃತ್ಯವು ಮಾನವೀಯತೆಯನ್ನೇ ಪ್ರಶ್ನಿಸುವಂತಾಗಿದೆ. ಹಲ್ಲೆಯಿಂದ ಮಕ್ಕಳ ಮೈ, ಕೈ ಮತ್ತು ಕಾಲುಗಳ ಮೇಲೆ ತೀವ್ರ ಬಾಸುಂಡೆಗಳು ಉಂಟಾಗಿದ್ದು, ಒಂದು ಮಗುವಿನ ಕೈ ಮುರಿದಿದೆ ಎಂದು ಹೇಳಲಾಗಿದೆ. ಗಾಯಗೊಂಡ ಮಕ್ಕಳ ಸ್ಥಿತಿಯನ್ನು ಕಂಡ ಸ್ಥಳೀಯರು ಮಕ್ಕಳ ಸಹಾಯವಾಣಿ (ಚೈಲ್ಡ್ ಹೆಲ್ಪ್‌ಲೈನ್) ಗೆ ದೂರು ನೀಡಿದ್ದು, ದೂರಿನನ್ವಯ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ ಮಕ್ಕಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯ ನಂತರ ಹೆದರಿಕೊಂಡಿರುವ ಮಕ್ಕಳು, ಹಲ್ಲೆಯ ಬಗ್ಗೆ ಸ್ಪಷ್ಟವಾಗಿ ಏನೂ ಹೇಳಲು ಸಾಧ್ಯವಾಗದೆ ಆತಂಕದಲ್ಲಿದ್ದಾರೆ ಎನ್ನಲಾಗಿದೆ. ಮಕ್ಕಳ ತಾಯಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳಿದ್ದ ವೇಳೆ ಅಪರಿಚಿತರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆ ನಡೆಸಿದ ದುರುಳರ ಪತ್ತೆಗೆ ತನಿಖೆ ಮುಂದುವರಿದಿದೆ. ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ : ಉತ್ತರ ಪ್ರದೇಶ | ಮತದಾರರ “ಪರಿಷ್ಕರಣೆಯೋ? ಹರಣವೋ? | ಗುರುರಾಜ ದೇಸಾಯಿ| Janashakthi Media #upsir
