ಬೆಂಗಳೂರು: ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೆಯುತ್ತಿದೆ. ಇದು ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು ಎಂದು ಹಿರಿಯ ಪತ್ರಕರ್ತ ಇಂಧೂದರ ಹೊನ್ನಾಪುರ ತಿಳಿಸಿದರು. ರೈತ
ಚನ್ನರಾಯಪಟ್ಟಣದ ರೈತರು ಇಂದಿನಿಂದ ಫ್ರೀಡಂಪಾರ್ಕ್‌ನಲ್ಲಿ ಆರಂಭಿಸಿರುವ ಅಹೋರಾತ್ರಿ ಧರಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹಾರ ಮಾಡುವ ಬದಲು ಸಮಸ್ಯೆಯನ್ನ ಹೆಚ್ಚು ಮಾಡ್ತಿದ್ದಾರೆ. ಇವತ್ತು ರೈತರ ವಿರುದ್ಧ ನಿಂತಿರುವ ಅದೇ ಸಿದ್ದರಾಮಯ್ಯ ಅವರು ಅವತ್ತು ರೈತರ ಪರ ಮಾತಾಡಿದ್ರು. ಪದೇ ಪದೇ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀನಿ ಅಂತಾ ಹೇಳುತ್ತಿದ್ದಾರೆ, ಈ ಮಾತನ್ನು ಉಳಿಸಿಕೊಳ್ಳಿ . ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ ಎಂದು ಆಕ್ರೋಶ ಹೊರಹಾಕಿದರು.
ಈ ಕಾರ್ಪೊರೇಟ್ ಸೆಕ್ಟರ್ ಎಲ್ಲಾ ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಅಂದ್ರೆ ಬರೀ ಕಾರ್ಖಾನೆಗಳನ್ನ ಆರಂಭಿಸುವುದಲ್ಲ. ಎಲ್ಲ ಜನರ ನೆಮ್ಮದಿ..ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ: ಜಮೀರ್ ಅಹಮದ್ ಕ್ಷೇತ್ರದಲ್ಲಿ 55.32 ಕೋಟಿ ರೂ. ವಂಚನೆ: ಎನ್.ಆರ್.ರಮೇಶ್ ಆರೋಪ ರೈತ
ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ. ಅವರಿಗೆ ಅವರು ಕೇಳಿದ ಭೂಮಿ ಕೊಡಬೇಕು ಅಂತಾ ಅವರಿಗೆ ನಾನು ಕೇಳ್ತೀನಿ, ನಾಳೆ ಕಾರ್ಪೊರೇಟ್ ಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ, ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇವತ್ತು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ..ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ…. ಎಂದು ಪ್ರಶ್ನಿಸಿದರು.
ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಿ, ಅಭಿವೃದ್ಧಿ ಅಂದ್ರೆ ಎಲ್ಲಾ ಜನರ ಪರವಾಗಿರೋದು ಎಂಬುದನ್ನು ಮುಖ್ಯಮಂತ್ರಿಗಳು ಅರಿಯಬೇಕಿದೆ. ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗ ಆಗಬೇಡಿ ಎಂದು ಎಚ್ಚರಿಸಿದರು.

ಸಿದ್ದರಾಮಯ್ಯ ಅವರೇ ನೀವೆಲ್ಲರು ವಿವೇಚನೆ ಇರೋರು ಅಂತಾ ನಾವು ನಂಬಿದ್ದೇವೆ..ನೀವು ಎಲ್ಲರ ಒಳಿತು. ಈ ನೆಲ, ಜಲವನ್ನ ಉಳಿಸೋದು ಅನಿವಾರ್ಯ. ನಿಮಗೆ ಒತ್ತಡ ಇದೆ ಅಂತಾ ಗೊತ್ತು, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲಾ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ. ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟವಾಗಲಿದೆ. ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಒಗ್ಗೂಡಿ ಐಕ್ಯತೆಯಿಂದ ಹೋರಾಟ ನಡೆಸುತ್ತಿವೆ. ತಕ್ಷಣವೇ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ, ಎಐಟಿಯುಸಿಸಿಯ ಅಪ್ಪಣ್ಣ, ದಲಿತ ನಾಯಕ ವಿ.ನಾಗರಾಜ. ಎಐಕೆಸ್ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್, ಪ್ರಾಂತರೈತ ಸಂಘದ ರಾಜ್ಯ ಕಾರ್ಯದರ್ಶಿ ಟಿ.ಯಶವಂತ, ಮುಖಂಡರಾದ ಪ್ರಭಾ ಎನ್, ಡಿಚ್. ಪೂಜಾರ್, ಕುಮಾರ್ ಸಮತಳ ಹಾಗೂ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಇದ್ದರು.
ಇದನ್ನೂ ನೋಡಿ: ದೇವನಹಳ್ಳಿ ಚಲೋ | ಜೈಲಿಗೆ ಹಾಕುವುದಾದರೆ ಹಾಕಿ, ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ : ಪ್ರಕಾಶ್ ರಾಜ್ ರೈತ
