ಹಾವೇರಿ: ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು ಅಪಘಾತವುಂಟಾದ ಪರಿಣಾಮ ಮಸಣವನ್ನು ಸೇರುವಂತಾಗಿದೆ.
ರಾಣೆಬೆನ್ನೂರಿನ ಹಲಗೇರಿ ಬೈಪಾಸ್ ಬಳಿ ಕಾರಿನಲ್ಲಿ ಕುಟುಂಬವೊಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೊರಟ್ಟಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯಿಂದ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಎನ್‌ಡಿಎ ಮೈತ್ರಿ ಕೂಟದ ವ್ಯಂಗ್ಯ ಕಾರ್ಟೂನ್ ವಿಡೀಯೋ ಪೋಸ್ಟ್: ತಮಾಷೆ ಮೂಲಕ ಮೋದಿಯನ್ನು ಟೀಕಿಸಿದ ರಾಜ್ಯ ಕಾಂಗ್ರೆಸ್
ಮೃತಪಟ್ಟವರನ್ನು ಸುರೇಶ್ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ(22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ (28) ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ ಹೊನ್ನಪ್ಪ, ನೀಲಪ್ಪ ಬಾರ್ಕೆ, ಪ್ರಭುರಾಜ ಈರಪ್ಪ ಸಮಗಂಡಿ ಮತ್ತು ಗೀತಾ ಹೊನ್ನಪ್ಪ ಬಾರ್ಕಿ ಎಂಬುವರು ಗಾಯಗೊಂಡಿದ್ದು ಗಾಯಾಳುಗಳನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ವೇಗವಾಗಿ ಚಾಲನೆ ಮಾಡಿದ್ದರಿಂದ ಈ ದುರುಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಹಾವೇರಿ-ಗದಗ ಲೋಕಸಭಾ ಬಿಜೆಪಿ ಉಸ್ತುವಾರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತಾಪ ವ್ಯಕ್ತಪಡಿಸಿ, ಮೃತರ ಹಾಗೂ ಗಾಯಗೊಂಡಿರುವ ಕುಟಂಬಗಳಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ದೇವೇಗೌಡ್ರೆ ಜನ ನಿಮಗೆ ಅಧಿಕಾರ ಕೊಟ್ರು – ನೀವು ವಿಕೃತಿ ಕಾಮಿಯನ್ನು ಕೊಟ್ರಿ. ನಿಮಗೆ ನಾವು ತಕ್ಕ ಪಾಠ ಕಲಿಸುತ್ತೇವೆ.