ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಅಕ್ಟೋಬರ್ 22ರಂದು ಬಂಧಿಸಿದ್ದಾರೆ.
ಬಂಧಿತರನ್ನು ಕಾರ್ತಿಕ್, ಗ್ಲೆನ್ ಮತ್ತು ಸಿಯೋಗ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಾಮೂಹಿಕ
ಸಂತ್ರಸ್ತ ಮಹಿಳೆಯ 14 ವರ್ಷದ ಮಗ ಸೇರಿದಂತೆ ಸಂತ್ರಸ್ತೆ ಸ್ನೇಹಿತೆ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪಕ್ಕದ ಮನೆಯ ರೂಂಗೆ ಎಳೆದೊಯ್ದು ಅತ್ಯಾಚಾರ ಎಸಗಿದರು. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಗೆ ಕರೆ ಮಾಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದರು.
ಇದನ್ನೂ ಓದಿ: ಸಂಡೂರು | ಶಿಕ್ಷಕರ ಕೋರತೆಯಿಂದ ಉಪಯೋಗಕ್ಕೆ ಬಾರದ ಕಂಪ್ಯೂಟರ್ ಗಳು
ಕೇಸ್ ಕುರಿತಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಪ್ರತಿಕ್ರಿಯಿಸಿದ್ದು, ಅಕ್ಟೋಬರ್ 21ರ ರಾತ್ರಿ ಮಾದನಾಯಕನ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಟ್ಟು ಐವರು ಆರೋಪಿಗಳು ಮೂರು ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳದ ಮಹಿಳೆ ಮನೆಗೆ ನುಗ್ಗಿದ್ದಾರೆ. ಇಬ್ಬರು ಗಂಡಸರನ್ನ ಕಟ್ಟಿ ಹಾಕಿ, ಬಳಿಕ ಹಲ್ಲೆ ಮಾಡಿ ಅತ್ಯಾಚಾರವೆಸಗಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದೇವೆ. ಗ್ಯಾಂಗ್ ರೇಪ್ ಹಾಗೂ ರಾಬರಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆಯಲ್ಲಿ ಹಲ್ಲೆಗೊಳಗಾದ ಇಬ್ಬರು ಪುರುಷರಿಗೆ ನಿಮಾನ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಬಳಿ ಇರುವ ಮೊಬೈಲ್ ಹಾಗೂ 50 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರಿಗಾಗಿ ಮೂರು ತಂಡಗಳನ್ನ ರಚಿಸಿ ಹುಡುಕಾಟ ನಡೆಸಲಾಗುತ್ತಿದೆ ಎಂದರು.
ಪ್ರಕರಣ ಗಂಭೀರವಾಗಿರುವುದರಿಂದ ಡಿವೈಎಸ್ ನೆಲಮಂಗಲದ ಅಧಿಕಾರಿಯಿಂದ ತನಿಖೆ ಮಾಡಿಸಲಾಗುತ್ತಿದೆ. ಕೆಲವರ ಫೋಟೋ ತೋರಿಸಿದಾಗ ಹೆಸರು ಸಮೇತವಾಗಿ ಹೇಳುತ್ತಿದ್ದಾರೆ. ಹಾಗಾಗಿ ಅವರಿಗೆ ಪರಿಚಯ ಇದ್ದಾರಾ, ಇಲ್ಲವಾ ಎನ್ನುವುದನ್ನು ನೋಡಬೇಕು ಎಂದು ಎಸ್ಪಿ ಹೇಳಿದ್ದಾರೆ.
ಇದನ್ನೂ ನೋಡಿ: ಸೌಜನ್ಯ ಹುಟ್ಟಿದ ದಿನ ಇಂದು | ಸೌಜನ್ಯಳಿಗೆ ನ್ಯಾಯ ಸಿಗಬೇಕಿದೆ Janashakthi Media
