ನೆಲಮಂಗಲ: ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗಿನ ಜಾವ 3.30 ಸಮಯದಲ್ಲಿ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ನೆಲಮಂಗಲ
ಇದನ್ನೂ ಓದಿ: ಟ್ರಾಫಿಕ್ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಮಹಿಳೆ ಸೇರಿ ಇಬ್ಬರ ಬಂಧನ
ಭೀಕರ ರಸ್ತೆ ಅಪಘಾತದಲ್ಲಿ ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರಾಗಿದ್ದಾರೆ.
ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಟೈಯರ್ ಪಂಚರ್ ಆಗಿದ್ದರಿಂದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ದಾಖಲಾಗಿದೆ.
https://www.youtube.com/watch?v=LWhp6Uf_tw0
