ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೆಟ್ಟರ್, ಸಣ್ಣ ನೀರಾವರಿ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಇವರುಗಳು ಇಂದು ವಿಧಾನಪರಿಷತ್‌ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೆಟ್ಟರ್, ಸಣ್ಣ ನೀರಾವರಿ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಇವರುಗಳು ಸಭಾಪತಿ ಬಸವರಾಜಹೊರಟ್ಟಿ ಅವರ ಸಮ್ಮುಖದಲ್ಲಿ ಪರಿಷತ್‌ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜಗದೀಶ್‌ಶೆಟ್ಟರ್ ಮತ್ತು ಸಚಿವ ಬೋಸರಾಜು ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಿಪ್ಪಣ್ಣಪ್ಪ ಕಮಕನೂರು ಅವರು ಯಾನಾಗುಂದಿಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ:ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಪ್ರಮಾಣ ವಚನ ಸ್ವೀಕಾರದ ನಂತರ ನೂತನ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಸಭಾಪತಿಗಳು ನೂತನ ಸದಸ್ಯರುಗಳಿಗೆ ಸದನದ ನಿಯಮಾವಳಿಗಳನ್ನೊಳಗೊಂಡ ಪುಸ್ತಕ ಇರುವ ಕಿಟ್ಟನ್ನು ನೀಡಿದರು.
ಈ ಸಂದರ್ಭದಲ್ಲಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ,ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ್, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಹಾಗೂ ಕೆಲ ಶಾಸಕರು ಉಪಸ್ಥಿತರಿದ್ದರು.