ಬೆಂಗಳೂರು: ಶೋಭಾ ಡ್ರೀಮ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಮನೆ ಕೆಲಸದಾಕೆಯನ್ನು ಕಳ್ಳತನ ಪ್ರಕರಣದಲ್ಲಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 4ರ ರಾತ್ರಿ ವರ್ತೂರು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ಡಿಸಿಪಿ ಪರಶುರಾಮ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಮಹಿಳೆ
ಪ್ರಕರಣದ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ ಹಾಗೂ ಸೀಮಾಂತ್‌ಕುಮಾರ್ ಸಿಂಗ್ ಆದೇಶಿಸಿದ್ದೂ, ಮಾರತ್‌ಹಳ್ಳಿ ವಿಭಾಗದ ಎಸಿಪಿಯವರು ತನಿಖೆ ನಡೆಸಿ ವರದಿ ಸಲ್ಲಿಸಿದ ಬೆನ್ನಲ್ಲೇ ಸಂಜಯ್ ರಾಥೋಡ್, ಸಂತೋಷ್ ಕುದ್ರಿ ಹಾಗೂ ಅರ್ಚನಾ ಅವರನ್ನು ಅಮಾನತು ಮಾಡಲಾಗಿದೆ. ಮಹಿಳೆ
ಪಿಎಸ್‌ಐ ಮೌನೇಶ್ ದೊಡ್ಡಮನಿ ಅವರು ಎನ್‌ಸಿಆರ್ ದಾಖಲಿಸಿಕೊಂಡು ಠಾಣೆಯಿಂದ ಹೊರಹೋಗಿ ಲೋಪ ಎಸಗಿದ್ದಾರೆ. ಅವರ ವಿರುದ್ಧ ರೂಲ್ಸ್ 7 ಜಾರಿ ಮಾಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಎಂಯುಟಿಎಸ್ ಸಹಾಯಕ್ ಪರಿಚಯ
ಶೋಭಾ ಡ್ರೀಮ್ ಅಪಾರ್ಟ್‌ಮೆಂಟ್‌ನಲ್ಲಿ ಪ್ರಿಯಾಂಕಾ ಅವರಿಗೆ ಸೇರಿದ ಫ್ಲ್ಯಾಟ್‌ನಲ್ಲಿ ಹೊರರಾಜ್ಯದ ಸುಂದರಿ ಬೀಬಿ (34) ಅವರು ಕೆಲಸ ಮಾಡುತ್ತಿದ್ದರು. ಫ್ಲ್ಯಾಟ್‌ನಲ್ಲಿ ಕಸ ಗುಡಿಸುವಾಗ ಅವರಿಗೆ ₹100 ಸಿಕ್ಕಿತ್ತು. ಅದನ್ನು ಮಾಲೀಕರಿಗೆ ವಾಪಸ್ ಕೊಟ್ಟಿದ್ದರು.
ಆದರೆ, ಹಣದ ಜೊತೆಗೆ ಮನೆಯಲ್ಲಿ ವಜ್ರದ ಉಂಗುರ ಸಹ ಕಳ್ಳತನವಾಗಿದೆ ಎಂದು ಆರೋಪಿಸಿದ್ದ ಮಾಲೀಕರು, ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಸುಂದರಿ ಬೀಬಿ ಹಾಗೂ ಅವರ ಪತಿಯನ್ನು ಠಾಣೆಗೆ ಕರೆದೊಯ್ದು ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿತ್ತು.
ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗವೂ ಸೂಚನೆ ನೀಡಿತ್ತು.
ಇದನ್ನೂ ನೋಡಿ: ಬಿಹಾರ ಚುನಾವಣೆ | ಭರಪೂರ ಭರವಸೆ -ಬದಲಾವಣೆಯತ್ತ ಮತದಾರರ ಒಲವು Janashakthi Media | Bihar Election 2025
