ರಾಯಚೂರು| ಐವರ ಕೊಲೆ ಪ್ರಕರಣ: ಮೂವರಿಗೆ ಮರಣದಂಡನೆ

ರಾಯಚೂರು: 2020ರಲ್ಲಿ ಜಿಲ್ಲೆಯ ಸಿಂಧನೂರಿನ ಸುಕಾಲಪೇಟೆಯಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ , ಬುಧವಾರ ಏಪ್ರಿಲ್​ 08ರಂದು ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ರಾಯಚೂರು

ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ರಾಯಚೂರು

A-1 ಆರೋಪಿ ಸಣ್ಣ ಫಕೀರಪ್ಪ, A- 2 ಅಂಬಣ್ಣ, A-3 ಸೋಮಶೇಖರ್ ಗೆ ಗಲ್ಲು ಶಿಕ್ಷೆಯಾಗಿದ್ದರೆ, ಇನ್ನುಳಿದಂತೆ A- 4 ರೇಖಾ, A-5 ಗಂಗಮ್ಮ, A- 6 ದೊಡ್ಡ ಫಕೀರಪ್ಪ, A-7 ಹನುಮಂತ, A-8 ಹೊನ್ನೂರಪ್ಪ, A-9 ಬಸಲಿಂಗಪ್ಪ, A- 10 ಅಮರೇಶ್,A- 11- ಶಿವರಾಜ್, A- 12 ಪರಸಪ್ಪಗೆ ಜೀವಾವಧಿ ಶಿಕ್ಷೆ ಜೊತೆ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಟ್ರಂಪ್ ನೀತಿಗಳವಿರುದ್ಧ 1200 ‘ಹ್ಯಾಂಡ್ಸ್ ಆಫ್’ ಪ್ರತಿಭಟನೆಗಳಲ್ಲಿ ಜನಸಾಗರ

ಪ್ರಕರಣದ ಹಿನ್ನೆಲೆ

ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಜುಲೈ 11 ನೇ 2020 ರಂದು ಸಂಜೆ 04-45 ಗಂಟೆ ಸುಮಾರಿಗೆ ಸಣ್ಣ ಪಕೀರಪ್ಪ ಸೇರಿ ಎಲ್ಲ ಆರೋಪಿತರು ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದಾಳಿ ಮಾಡಿದ್ದು, ಈರಪ್ಪ ಆತನ ಪತ್ನಿ ಸುಮಿತ್ರಮ್ಮ. ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ ಶ್ರೀದೇವಿ ಅವರನ್ನು ಕೊಲೆ ಮಾಡಿದ್ದರು.

ಅಲ್ಲದೇ ಮೃತ ಈರಪ್ಪನ ಸೊಸೆಯಾದ ರೇವತಿ ಹಾಗೂ ಆತನ ಮಗಳಾದ ತಾಯಮ್ಮ ಮೇಲೂ ಮಾರಾಣಾಂತಿಕೆ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಗರದ ಸುಕಾಲಪೇಟೆಯ ಈರಪ್ಪ ಅವರ ಪುತ್ರ ಮೌನೇಶ್, ಅದೇ ಏರಿಯಾದ ಸಣ್ಣ ಫಕೀರಪ್ಪನ ಪುತ್ರಿ ಮಂಜುಳಾ ಎನ್ನುವರು ಪರಸ್ಪರ ಪ್ರೀತಿಸಿದ್ದರು. ಆದ್ರೆ, ಇಬ್ಬರ ಪ್ರೀತಿಗೆ ಯುವತಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಸಹ ಮೌನೇಶ್ ಹಾಗೂ ಮಂಜುಳಾ ಮದುವೆಯಾಗಿದ್ದರು. ಇದರಿಂದ ಯುವತಿ ಮನೆಯವರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿ ದಿನ ಎರಡೂ ಕುಟುಂಬಗಳ ನಡುವೆ ವಾಗ್ದಾದ, ಜಗಳ ನಡೆಯುತ್ತಲೇ ಇದ್ದವು. ಆದ್ರೆ, 2020, ಜುಲೈ 11ರಂದು ಸಂಜೆ ಸಣ್ಣ ಪಕೀರಪ್ಪ ಸಹೋದರರು ಈರಪ್ಪನ ಮನೆಗೆ ನುಗ್ಗಿ ದೊಂಣೆ, ಕೊಡಲಿ, ಮಚ್ಚುಗಳಿಂದ ದಾಳಿ ಮಾಡಿ ಐವರನ್ನು ಹತ್ಯೆ ಮಾಡಿದ್ದರು.

ಇದನ್ನೂ ನೋಡಿ: ವಿದ್ಯಾರ್ಥಿಗಳು ತಿನ್ನುವ ಅನ್ನಕ್ಕೆ ವಾರ್ಡನ್‌ ಕನ್ನ Janashakthi Media

Donate Janashakthi Media

Leave a Reply

Your email address will not be published. Required fields are marked *