ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ನಿಧನ

ಬೆಂಗಳೂರು: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಬ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಮೃತರಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಈ ರಸ್ತೆ ಅಪಘಾತದಲ್ಲಿ ಐವರು ಯೋಧರು ಗಾಯಗೊಂಡಿದ್ದು, ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು. ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಸಾಹಿತ್ಯ ಸಮ್ಮೇಳನ – ಯಶಸ್ಸು ಸಾಫಲ್ಯಗಳ ನಡುವೆ

ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರ. ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆದಿದೆ.

ನೀಲಂ ಪ್ರಧಾನ ಕಚೇರಿಯಿಂದ ಬಲೋಯಿ ಘೋರಾ ಪೋಸ್ಟ್‌ಗೆ ಈ ವಾಹನ ಬರುತ್ತಿತ್ತು, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ನೋಡಿ: ಎನ್ನ ಕಣ್ಣೊಳಗಣ ಕಟ್ಟಿಗೆಯ ಮುರಿವವರನಾರನೂ ಕಾಣೆ. ಎನ್ನ ಕಾಲೊಳಗಣ ಮುಳ್ಳ ತೆಗೆವವರನಾರನೂ ಕಾಣೆ. ಎನ್ನ ಅಂಗದಲ್ಲಿದ್ದ

Donate Janashakthi Media

Leave a Reply

Your email address will not be published. Required fields are marked *