ಮಂಡ್ಯ: ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿದರೂ ಕೂಡ ಸಿಬ್ಬಂದಿಗಳ ಕಿರುಕುಳ ನಿಲ್ಲುತಿಲ್ಲ. ಇದೀಗ ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಯಲಿಯೂರು ಬಳಿ ನಡೆದಿದೆ. ಮೈಕ್ರೋ
ಹೌದು ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು ಎಂದು ಬಂದಿದೆ.
ಇದನ್ನೂ ಓದಿ: ಕೊಪ್ಪಳ | ಕೈಗಾರಿಕಾ ಮಾಲೀಕರ ಮತ್ತು ಮಾಲಿನ್ಯ ತಡೆಯದ ಸರಕಾರದ ದುರ್ನಡೆ – ಸಿಪಿಐಎಂ ಖಂಡನೆ
ಮಂಡ್ಯ ತಾಲೂಕಿನ ವಿ ಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (18) ಎಂದು ತಿಳಿದುಬಂದಿದೆ.
ಪತ್ನಿ ಮಗಳೊಂದಿಗೆ ಆತ್ಮಹತ್ಯೆಗೆ ಮಾಸ್ತಪ್ಪ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿಯಾಗಿರುವ ಮೃತರು ಎಂದು ತಿಳಿದುಬಂದಿದ್ದು, ಮಾಸಪ್ಪ ಆಟೋ ಚಾಲಕರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರ ಮರೆತಮೃತ ದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಉಳಿಮೆ ಮಾಡುತ್ತಿದ್ದ ಭೂಮಿಯಲ್ಲಿ ಗುಂಡಿ ತೋಡಿದ ಅರಣ್ಯ ಇಲಾಖೆ : ಗುಂಡಿ ಮುಚ್ಚಿ ಆಕ್ರೋಶ ವ್ಯಕ್ತ ಪಡಿಸಿದ ರೈತರು