ಹೊಸನಗರ| ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು

ಹೊಸನಗರ: ಏಪ್ರಿಲ್‌ 9ರಂದು ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ ರಸ್ತೆ ಅಂಚಿನ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವಾಗ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ

ಕೆಲಸದಲ್ಲಿ ನಿರತರಾಗಿದ್ದ ಇತರ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟಿರುವ ಕಾರ್ಮಿಕರು ಹಾವೇರಿ ಜಿಲ್ಲೆಯವರು. ಆದರೆ, ಅವರ ಹೆಸರು, ಮತ್ತಿತರ ವಿವರ ತಕ್ಷಣಕ್ಕೆ ಗೊತ್ತಾಗಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಶೇ. 84ರಷ್ಟು ರಿಸಲ್ಟ್

ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಸ್ಥಾನದ ಸಮೀಪದ ಹೇರ್‌ಪಿನ್ ತಿರುವಿನ ಬಳಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆಯೇ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಈ ಅವಘಡ ಸಂಭವಿಸಿದೆ. ಮಣ್ಣಿನ ಅಂಚಿನಲ್ಲಿ ಇನ್ನೂ ಯಾರಾದರೂ ಸಿಲುಕಿರಬಹುದೇ ಎಂಬುದನ್ನು ಅರಿಯಲು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ನಗರ ಠಾಣೆ ಪಿಎಸ್‌ಐ ಶಿವಾನಂದ ಕೋಳಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ನೋಡಿ: 1 ಲಕ್ಷ ಶಿಕ್ಷಕರು ಜನಗಣತಿಗೆ: ಶಿಕ್ಷಣ ವ್ಯವಸ್ಥೆಗೆ ದೊಡ್ಡ ಹೊಡೆತ? Janashakthi Media

Donate Janashakthi Media

Leave a Reply

Your email address will not be published. Required fields are marked *