ಉಡುಪಿ: ಶನಿವಾರ ಸಂಜೆ ಕುಟುಂಬ ಸಮೇತರಾಗಿ ಕುಂದಾಪುರ ಸಮೀಪದ ಕೋಡಿ ಬೀಚ್‌ಗೆ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ನಡೆದಿದೆ.
ಅಂಪಾರು ಐದು ಸೆಂಟ್ ನಿವಾಸಿ ದಾಮೋದರ್ ಪ್ರಭು ಎಂಬುವರ ಮಗ ಧನರಾಜ್ (23) ಸಾವನ್ನಪ್ಪಿದ್ದೂ, ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು ಇದುವರೆಗೆ ಪತ್ತೆಯಾಗಿಲ್ಲ.
ಈ ಮೂರು ಜನರು ಸಹೋದರರಾಗಿದ್ದು, ಮೃತನಾಗಿರುವ ಧನರಾಜ್ (23) ವಿಪ್ರೋ ದಲ್ಲಿ ಕೆಲಸ ಮಾಡುತ್ತಿದ್ದನು. ಧನುಷ್ ಸುರತ್ಕಲ್ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರು ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ದರ್ಶನ್ (18) ಕುಂದಾಪುರ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾರೆ. ಉಡುಪಿ
ಇದನ್ನೂ ಓದಿ: ಕೋವಿಡ್ ಹಗರಣ: ನಾ.ಕುನ್ನಾ ವರದಿಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟವು ಉಪ ಸಮಿತಿ ಸಭೆ
ಘಟನೆಯನ್ನು ಬೆಂಗಳೂರಿನ ಪ್ರವಾಸಿಗರು ಗಮನಿಸಿ ತಕ್ಷಣ ಸಮುದ್ರಕ್ಕೆ ಹಾರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಆ ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ ಆದರೆ ದಾಮೋದರ ಪ್ರಭು ಅವರ ಅಣ್ಣನ ಮಗ ದರ್ಶನ್ ನಾಪತ್ತೆಯಾಗಿದ್ದು ಅವರ ಪತ್ತೆಗಾಗಿ ಈಜು ತಜ್ಞರು ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ಶನಿವಾರ ಆಗಿದ್ದರಿಂದ ಮೂವರು ಸಹೋದರರು ಸಂಜೆ 6 ಗಂಟೆ ಸುಮಾರಿಗೆ ಕೋಡಿ ಬೀಚಿನಲ್ಲಿ ಈಜಾಡಲು ಬಂದಿದ್ದರು ಎನ್ನಲಾಗಿದೆ. ಗಂಭೀರ ಗೊಂಡಿರುವ ಧನುಷ್ ಹಾಗೂ ಶವವಾಗಿ ಪತ್ತೆಯಾಗಿರುವ ಧನರಾಜ್ ಇಬ್ಬರು ಮುಖಕ್ಕೆ ಮಾಸ್ಕಸ್ ಮತ್ತು ಕಣ್ಣಿಗೆ ಕಣ್ಣವಚ ಧರಿಸಿದ್ದರು. ಮೇಲ್ನೋಟಕ್ಕೆ ಈಜಾಡಲು ಸಿದ್ಧರಾಗಿ ಬಂದಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ನೋಡಿ: ಅಗ್ಘಣಿ ಮೀಸಲಾಗಬೇಕೆಂಬುದು ಶೀಲವೆ ? Janashakthi Media