ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಕೋಲಾರ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಸೂಚಿಸಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ ಗರಿಷ್ಠ ಉಷ್ಣಾಂಶ 38.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬಾಗಲಕೋಟೆಯಲ್ಲಿ ಕನಿಷ್ಠ 14.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಗುರುವಾರ ಚಾಮರಾಜನಗರ ಜಿಲ್ಲೆಯಲ್ಲಿ 1 ಸೆಂ.ಮೀ ಮಳೆ ಸುರಿದಿದೆ. ಜತೆಗೆ, ದಕ್ಷಿಣ ಒಳ ನಾಡಿನ ಹಲವೆಡೆ ಸಾಧಾರಣ ಮಳೆಯಾಗಿದೆ.